ರಾಜಕೀಯ

ಸಿಎಂ ಯಡಿಯೂರಪ್ಪ ಬದಲಾವಣೆ ವರದಿ ಬಲವಾಗಿ ತಳ್ಳಿಹಾಕಿದ ರಾಜ್ಯ ಬಿಜೆಪಿ

Lingaraj Badiger

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ಹೋಗುತ್ತಿದ್ದಂತೆಯೇ ಇತ್ತ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮಗಳ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ರಾಜ್ಯ ಬಿಜೆಪಿ, ಇದು ಆಧಾರರಹಿತ ಮತ್ತು ದಾರಿತಪ್ಪಿಸುವ ವರದಿಗಳು ಎಂದು ಮಂಗಳವಾರ ಹೇಳಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗಲಿದೆ ಎಂದು ಕೆಲವು ಟಿವಿ ಚಾನೆಲ್‌ಗಳು ಪದೇ ಪದೇ ವರದಿ ಮಾಡಿವೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಹೇಳಿದ್ದಾರೆ.

"ಬಿಜೆಪಿ ಈ ವರದಿಯನ್ನು ಬಲವಾಗಿ ನಿರಾಕರಿಸುತ್ತದೆ" ಎಂದು ಅವರು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. "ಅಂತಹ ವರದಿಗಳು ಸಂಪೂರ್ಣವಾಗಿ ಆಧಾರರಹಿತ, ದಾರಿತಪ್ಪಿಸುವ ಮತ್ತು ಸತ್ಯದಿಂದ ದೂರವಿದೆ ಎಂದು ನಾವು ಸ್ಪಷ್ಟವಾಗಿ ಹೇಳುತ್ತೇವೆ" ಎಂದು ಕಾರ್ನಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಡಿಯೂರಪ್ಪ ಅವರ ವಯಸ್ಸನ್ನು ಪರಿಗಣಿಸಿ ನಾಯಕತ್ವ ಬದಲಾವಣೆ ಸಾಧ್ಯತೆ ಇದೆ ಎಂಬ ಮಾತುಗಳು ಹಲವು ದಿನಗಳಿಂದ ಕೇಳಿಬರುತ್ತಿವೆ. ಆದರೆ 77 ವರ್ಷದ ಯಡಿಯೂರಪ್ಪ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಉಹಾಪೋಹಗಳು ವೇಗ ಪಡೆದುಕೊಂಡಿದ್ದವು. ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ, ಹಲವು ಕೇಂದ್ರ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು.

SCROLL FOR NEXT