ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ 
ರಾಜಕೀಯ

ಕಾರ್ಯನಿರ್ವಾಹಕರು, ನ್ಯಾಯಾಂಗ ಅಧಿಕಾರಿಗಳ ವೇತನವನ್ನೂ ಕಡಿತಗೊಳಿಸಿ: ಸರ್ಕಾರಕ್ಕೆ ವಿಪಕ್ಷಗಳ ಆಗ್ರಹ

ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾಗಿ ಸಚಿವರು, ಶಾಸಕರ ಶೇ.30ರಷ್ಟು ವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕಲಿಸಲಾಗಿದ್ದು, 8 ವಿಧೇಯಕಗಳನ್ನು ಮಂಡಿಸಲಾಯಿತು. 

ಬೆಂಗಳೂರು: ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾಗಿ ಸಚಿವರು, ಶಾಸಕರ ಶೇ.30ರಷ್ಟು ವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕಲಿಸಲಾಗಿದ್ದು, 8 ವಿಧೇಯಕಗಳನ್ನು ಮಂಡಿಸಲಾಯಿತು. 

2020ನೆ ಸಾಲಿನ ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ತೆಗಳು ಹಾಗೂ ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಜೆಡಿಎಸ್ ಹಿರಿಯ ಸದಸ್ಯ ಎ.ಟಿ.ರಾಮಸ್ವಾಮಿ ಅವರು, ನ್ಯಾಯಾಂಗ ಇಲಾಖೆಯಲ್ಲಿ ವೇತನ ಪರಿಷ್ಕರಣೆ ಮಾಡಿದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಶಾಸಕಾಂಗದ ಒಪ್ಪಿಗೆ ಪಡೆಯದೇ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಇಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರು ಯಾರು? ಸರ್ಕಾರ ಅಷ್ಟು ಬಲಹೀನವಾಯಿತಾ? ಎಂದು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು.

ಕೋವಿಡ್ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಕರ್ನಾಟ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು ವಿಧೇಯಕ 2020ರ ಮೇಲಿನ ಚರ್ಚೆ ವೇಳೆ ಈ ವಿಚಾರ ಪ್ರಸ್ತಾಪಿಸಿ ರಾಮಸ್ವಾಮಿಯವರು, ಕೋವಿಟ್ ಹಿನ್ನೆಲೆಯಲ್ಲಿ ಚುನಾಯಿತ ಪ್ರತಿನಿಧಿಗಳ ವೇತನ, ಭತ್ಯೆ ಕಡಿತಕ್ಕೆ ನಮ್ಮ ಯಾವುದೇ ವಿರೋಧವಿಲ್ಲ. ಆದರೆ, ನ್ಯಾಯಾಂಗ ಅಧಿಕಾರಿಗಳೂ ಕೂಡ ಇಂತಹ ಸಂಕಷ್ಟದ ಸಂದರ್ಭದಲ್ಲಿ ಶಾಸನ ಸಭೆಯ ಒಪ್ಪಿಗೆಯನ್ನೂ ಪಡೆಯದೆ ತಮ್ಮ ವೇತನವನ್ನು ತಾವೇ ಹೆಚ್ಚಿಸಿಕೊಂಡಿದ್ದಾರೆ. ಆ ಬಳಿಕ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರ ಅಷ್ಟು ಬಲ ಹೀನವಾಗಿವಾಗಿದೆಯಾ ಎಂದು ಪ್ರಶ್ನಿಸಿದ್ದಾರೆ. 

ಇದಕ್ಕೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿಯವರು ಅಧಿಕಾರಿಗಳ ವೇತನ ಹೆಚ್ಚಳದ ಬಗ್ಗೆ ಸದ್ಯಕ್ಕೆ ಉತ್ತರ ಕೊಡುವ ಸ್ಥಿತಿಯಲ್ಲಿಲ್ಲ. ಈ ಬಗ್ಗೆ ಪೂರ್ಣ ಮಾಹಿತಿ ತರಿಸಿಕೊಂಡು ಸಭೆಗೆ ಉತ್ತರಿಸಲಾಗುತ್ತದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT