ವಿಧಾನಸೌಧ 
ರಾಜಕೀಯ

ಕರ್ನಾಟಕ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಅಕ್ಟೋಬರ್ 28 ರಂದು ಚುನಾವಣೆ

ಕರ್ನಾಟಕದ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮುಂದಿನ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ.

ನವದೆಹಲಿ: ಕರ್ನಾಟಕದ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮುಂದಿನ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ.

ಅಕ್ಟೋಬರ್ 1ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಕ್ಟೋಬರ್ 1 ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅ.8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಅ.9, ನಾಮಪತ್ರ ಹಿಂದಕ್ಕೆ ಪಡೆಯಲು ಅ.12 ಕೊನೆಯ ದಿನವಾಗಿದೆ. ನವೆಂಬರ್ 2 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.

ಕಳೆದ ಜೂನ್‌ 30 ಕ್ಕೆ ಚೌಡರೆಡ್ಡಿ ತೂಪಲ್ಲಿ, ಎಸ್‌.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡಿತ್ತು. ಈ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ