ರಾಜಕೀಯ

ಶಿರಾ, ಆರ್.ಆರ್.ನಗರ ಉಪ ಚುನಾವಣೆ: ಪ್ರಬಲ ಸ್ಪರ್ಧಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸಿದ್ಧತೆ

Sumana Upadhyaya

ಬೆಂಗಳೂರು: ತುಮಕೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಭರದ ಸಿದ್ಧತೆ ಮಾಡಿಕೊಳ್ಳುತ್ತಿವೆ.

ಶಿರಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿ ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದರೆ, ಆರ್ ಆರ್ ನಗರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಕಸರತ್ತು ನಡೆಸುತ್ತಿದೆ. ಆರ್ ಆರ್ ನಗರದಲ್ಲಿ ಬಿಜೆಪಿಯು ಎನ್ ಮುನಿರತ್ನ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಸಿರಾ ಕ್ಷೇತ್ರಕ್ಕೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ.

ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ಪ್ರಯತ್ನ ನಡೆಸುತ್ತಿವೆ. ಕೇಸರಿ ಪಡೆ ಬಿಜೆಪಿ ಇಲ್ಲಿನ ಚುನಾವಣೆ ಸಲೀಸಾಗಿ ನಡೆಯಬಹುದು ಎಂದು ಭಾವಿಸಿದೆ. ಆದರೆ ಪಕ್ಷಕ್ಕೆ ಒಂದು ಸವಾಲು ಮಾತ್ರ ಇದೆ, ಕಾಂಗ್ರೆಸ್ ನಿಂದ ಬಂದ ಮುನಿರತ್ನ ಅವರ ಅಭ್ಯರ್ಥಿತನವನ್ನು ಒಪ್ಪಿಕೊಂಡು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಈ ಉಪ ಚುನಾವಣೆಯಲ್ಲಿ ಒಗ್ಗಟ್ಟನಿಂದ ಕೆಲಸ ಮಾಡಬೇಕಿದೆ.

ತುಮಕೂರಿನ ಶಿರಾ ಕ್ಷೇತ್ರದಲ್ಲಿ ಜಯಚಂದ್ರ ಅವರ ಗೆಲುವಿಗೆ ಹಲವು ರೀತಿಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಸಿದ್ಧರಿದ್ದಾರೆ. ಶಿರಾ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿ ಬಲಶಾಲಿಯಾಗಿದ್ದು ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸದ್ಯದಲ್ಲಿಯೇ ಅಭ್ಯರ್ಥಿಯನ್ನು ಘೋಷಿಸಲಾಗುವುದು. ಬಿಜೆಪಿ ಸರ್ಕಾರದ ಸೋಲು ನಮಗೆ ಎರಡೂ ಕ್ಷೇತ್ರಗಳಲ್ಲಿ ವರವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಹೇಳುತ್ತಾರೆ.

ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿಯೆಂದರೆ ಪಕ್ಷದ ಬ್ಲಾಕ್ ಅಧ್ಯಕ್ಷ. ಇನ್ನು ಜೆಡಿಎಸ್ ನಲ್ಲಿ ಕೂಡ ಮಾಜಿ ಅಭ್ಯರ್ಥಿ ಜಿ ಎಚ್ ರಾಮಚಂದ್ರ ಇದ್ದರೂ ಪ್ರಬಲ ಪೈಪೋಟಿ ಕೊಡುವ ಅಭ್ಯರ್ಥಿಯನ್ನು ಹುಡುಕುವುದು ಕಷ್ಟವಾಗಿದೆ.

SCROLL FOR NEXT