ಮಂಗಳಾ ಅಂಗಡಿ 
ರಾಜಕೀಯ

ಬೆಳಗಾವಿಯಲ್ಲಿ ಮಂಗಳಾ ಅಂಗಡಿ ಗೆಲವು ಖಚಿತ: ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ನಡುವಲ್ಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ನಡುವಲ್ಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿವಂಗತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರು ಭಾರೀ ಮತಗಳ ಅಂತರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆಂದು ಹೇಳಿದ್ದಾರ. 

ಈ ಹಿಂದಿನ ಚುನಾವಣೆಯಲ್ಲಿ ಮಾಜಿ ಸಚಿವರು 4 ಲಕ್ಷಗಳ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಅವರ ಪತ್ನಿ ಕೂಡ ಅದೇ ರೀತಿಯಲ್ಲಿಯೇ ಗೆಲುವು ಸಾಧಿಸಲಿದ್ದಾರೆಂದು ತಿಳಿಸಿದ್ದಾರೆ. 

ಇದೇ ವೇಳೆ ಸಾರಿಗೆ ಮುಷ್ಕರ ಕುರಿತು ಮಾತನಾಡಿದ ಅವರು, ನಾನೇಕೆ ಪ್ರತಿಭಟಿಸುತ್ತಿರುವ ನೌಕರರೊಂದಿಗೆ ಮಾತುಕತೆ ನಡೆಸಲಿ? ಅವರ 8 ಆಗ್ರಹಗಳನ್ನು ಸರ್ಕಾರ ಈಡೇರಿಸಿದೆ. ಕೂಡಲೇ ಮುಷ್ಕರ ಕೈಬಿಟ್ಟು ನೌಕರರು ಕರ್ತವ್ಯಕ್ಕೆ ಹಾಜರಾಬೇಕೆಂದು ಹೇಳಿದ್ದಾರೆ. 

ಇದೀಗ ನಾವು ಬೆಂಗಳೂರಿಗೆ ತೆರಳುತ್ತಿದ್ದು, ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಮಾತುಕತೆ ಬಳಿಕವೂ ಮುಷ್ಕರ ಹಿಂಪಡೆಯದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು