ರಾಜಕೀಯ

ಯತ್ನಾಳ್ ವಿರುದ್ಧ ಕ್ರಮ: ಸುಳಿವು ನೀಡಿದ ಅರುಣ್ ಸಿಂಗ್

Manjula VN

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಸುಳಿವನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಶುಕ್ರವಾರ ನೀಡಿದ್ದಾರೆ. 

ರಾಜ್ಯದಲ್ಲು ಉಪಚುನಾವಣೆ ನಂತರ ನಾಯಕತ್ವದ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಅವರು, ಶಾಸಕ ಯತ್ನಾಳಅ ಹೇಳಿಕೆಗೆ ಅಷ್ಟೊಂದು ಮಹತ್ವ ಕೊಡುವ ಅಗತ್ಯವಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಅಂತಹ ಕನಸು ಕಾಣಬೇಡಿ ಎಂದು ಹೇಳಿದ್ದಾರೆ. 

ಇದೇ ವೇಳೆ ಶಾಸಕ ಯತ್ನಾಳ್ ವಿರುದ್ಧ ಕ್ರಮ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿ, ಯತ್ನಾಳ್ ಅವರನ್ನು ಏಕಾಏಕಿ ಉಚ್ಛಾಟನೆ ಮಾಡಲು ಸಾಧ್ಯವಿಲ್ಲ. ಅದಕ್ಕೊಂದು ಶಿಸ್ತು ಸಮಿತಿ ಇದ್ದು, ತನಿಖೆ ಮಾಡಿ ಕ್ರಮಕೈಗೊಳ್ಳಲಾಗುತ್ತದೆ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ. ಅವರ ಮೇಲೆ ಕ್ರಮ ಜರುಗಿಸುತ್ತೇವೆಂದು ತಿಳಿಸಿದ್ದಾರೆ. 

ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ದೊಡ್ಡ ಕುಟುಂಬ. ಕೆಲ ಸಲ ವೈಮನಸ್ಸು ಸಹಜ. ಅದನ್ನು ಬಗೆಹರಿಸುತ್ತೇವೆ. ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಪತ್ರ ಬರೆಯಬಾರದಿತ್ತು. ಆದರೆ, ಈಶ್ವರಪ್ಪ, ಯಡಿಯೂರಪ್ಪನವರು ಒಂದೇ ತಟ್ಟೆಯಲ್ಲಿ ಊಟ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದರಲ್ಲಿ ಅಸಮಾಧಾನ ಮಾತು ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದ್ದಾರೆ. 

SCROLL FOR NEXT