ಡಿಕೆ ಶಿವಕುಮಾರ್ 
ರಾಜಕೀಯ

'ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!?'

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಭಾರತೀಯ ಬಿಜೆಪಿ ಪ್ರಶ್ನಿಸಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಬಿಜೆಪಿ ಪ್ರಶ್ನಿಸಿದೆ.

ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೋಟ್ಯಂತರ ಬೆಲೆಯ ಆಸ್ತಿ ಸಂಗ್ರಹಿಸಿದ್ದು ಹೇಗೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಶ್ನಿಸಿದ ಬೆನ್ನಲ್ಲೇ ಬಿಜೆಪಿ ಸರಣಿ ಟ್ವಿಟ್ ಮೂಲಕ ತಿರುಗೇಟು ನೀಡಿದೆ. 

ಕಾಂಗ್ರೆಸ್ ಪಕ್ಷಕ್ಕೆ ಕಾಮಾಲೆ ರೋಗ ಬಾಧಿಸುತ್ತಿದೆ. ರಾಬರ್ಟ್ ವಾದ್ರಾ, ಸೋನಿಯಾ ಗಾಂಧಿ, ಚಿದಂಬರಂ, ಡಿ.ಕೆ.ಶಿ, ಖರ್ಗೆ ಅವರ ಖಜಾನೆ ತುಂಬಿದ್ದು ಹೇಗೆ ಎಂದು ಪ್ರಶ್ನಿಸುವ ಧೈರ್ಯವನ್ನು ಕಾಂಗ್ರೆಸ್ ತೋರಬೇಕು. ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!? ಎಂದು ಪ್ರಶ್ನಿಸಿದೆ. 

ಕನಕಪುರದಲ್ಲಿ ಕಳ್ಳ ವಹಿವಾಟು ನಡೆಸುತ್ತಿದ್ದ ಭ್ರಷ್ಟಾಚಾರ ಆರೋಪಿಯ ಘೋಷಿತ ಆಸ್ತಿಯೇ 840 ಕೋಟಿ. 2013ರಿಂದ 2018ರ ಅವಧಿಯಲ್ಲಿ ತನ್ನ ಆಸ್ತಿ 600 ಕೋಟಿ ವೃದ್ಧಿಸಿದೆ ಎಂದು ಮಹಾನಾಯಕ ಹೇಳಿಕೊಂಡಿದ್ದರು. ಇಂಧನದಲ್ಲಿ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ ಎಂದು ಕನಕಪುರದ ಮಹಾನಾಯಕನ ಪ್ರಶ್ನಿಸಿ ಎಂದು ಕಾಂಗ್ರೆಸ್‌ಗೆ ಹೇಳಿದೆ. 

ಕನಕಪುರದಲ್ಲಿ ಕಳ್ಳ ವಹಿವಾಟು ನಡೆಸುತ್ತಿದ್ದ ಭ್ರಷ್ಟಾಚಾರ ಆರೋಪಿಯ ಘೋಷಿತ ಆಸ್ತಿಯೇ 840 ಕೋಟಿ. 2013 ರಿಂದ 2018 ರ ಅವಧಿಯಲ್ಲಿ ತನ್ನ ಆಸ್ತಿ 600 ಕೋಟಿ ವೃದ್ಧಿಸಿದೆ ಎಂದು ಮಹಾನಾಯಕ ಹೇಳಿಕೊಂಡಿದ್ದರು.

ಮಜವಾದಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 600 ಕೋಟಿ ಸಂಪತ್ತು ಹೆಚ್ಚಾಗಿದೆ ಎಂದು ಡಿ.ಕೆ. ಶಿವಕುಮಾರ್ ಘೋಷಿಸಿಕೊಂಡಿದ್ದರು. ಹಾಗಾದರೆ ಉಳಿದ ಕುಖ್ಯಾತರಾದ ಜಾರ್ಜ್, ಮಹಾದೇವಪ್ಪ, ಎಂ.ಬಿ.ಪಾಟೀಲ್ ಮೊದಲಾದವರ ಲೂಟಿ ಎಷ್ಟು? ಎಂಎಲ್‌ಸಿ ಗೋವಿಂದರಾಜ್ ಐಟಿ ಡೈರಿಯನ್ನು ಒಮ್ಮೆ ಬಿಚ್ಚಿಸಿಡುವಿರಾ ಕಾಂಗ್ರೆಸ್?  ಎಂದು ಸವಾಲು ಹಾಕಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!