ಕುಮಾರಸ್ವಾಮಿ 
ರಾಜಕೀಯ

ಅಂತ್ಯಸಂಸ್ಕಾರವನ್ನಾದ್ರೂ ಗೌರವಯುತವಾಗಿ ನಡೆಸಿ: ಸರ್ಕಾರಕ್ಕೆ ಹೆಚ್‍ಡಿಕೆ ಮನವಿ

ವೆಂಟಿಲೇಟರ್ ಸೇರಿದಂತೆ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ವೆಂಟಿಲೇಟರ್ ಸೇರಿದಂತೆ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯ ಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)