ರಾಜಕೀಯ

ಅಘೋಷಿತ ಲಾಕ್‌ಡೌನ್‌ನಿಂದ ನಷ್ಟಕ್ಕೊಳಗಾಗುವ ಎಲ್ಲ ವರ್ಗದವರಿಗೂ ಸರ್ಕಾರ ಸೂಕ್ತ ಪರಿಹಾರ ನೀಡಬೇಕು: ಡಿಕೆಶಿ

Nagaraja AB

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿರುವ ಅಘೋಷಿತ ಲಾಕ್ ಡೌನ್ ನಿಂದ ನಷ್ಟಕ್ಕೊಳಗಾಗುವ ಎಲ್ಲ ವರ್ಗದವರಿಗೂ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಕೊರೋನಾ ಕರ್ಫ್ಯೂ ಘೋಷಣೆಯಾಗುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರ,  ಬಿಗಿ ಕ್ರಮದ ಹೆಸರಿನಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಆದರೆ, ಕೋವಿಡ್ ಮಾರ್ಗಸೂಚಿ ನಿಯಮಗಳಿಂದ ಯಾರಿಗೆ ತೊಂದರೆ ಆದರೂ ಅವರಿಗೆ ಸರ್ಕಾರ ಪರಿಹಾರ ನೀಡಬೇಕು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಬೇಕು, ಬಡ್ಡಿ ಮನ್ನಾ ಮಾಡಿ ಸಾಲ ಮರು ಪಾವತಿಗೆ ಗಡುವು ಮುಂದೂಡಬೇಕು ಎಂದರು.

ಆಟೋ, ಟ್ಯಾಕ್ಸಿ, ಟ್ರಾನ್ಸ್ ಫೋರ್ಟ್ ವಾಹನ ಚಾಲಕರಿಗೆ ರಕ್ಷಣೆ ನೀಡಬೇಕು, ಫೈನಾನ್ಷಿಯರ್ ಗಳು ಕೊಡುವ ಕಿರುಕುಳ ನಿಲ್ಲಿಸಬೇಕು. ಹೋಟೆಲ್, ಸಾರಿಗೆ , ರೆಸ್ಟೋರೆಂಟ್  ಉದ್ಯಮಗಳನ್ನು ಅಗತ್ಯ ಸೇವೆಗಳಿಗೆ ಪಟ್ಟಿಗೆ ಸೇರಿಸಬೇಕು, ಇಲ್ಲದಿದ್ದರೆ ರೈತರು, ಕಾರ್ಮಿಕರಂತೆಯೇ ವರ್ತಕರ ಪರವಾಗಿಯೂ ನಿಂತು ಕಾಂಗ್ರೆಸ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

SCROLL FOR NEXT