ಸುರೇಶ್ ಕುಮಾರ್ 
ರಾಜಕೀಯ

ಬೊಮ್ಮಾಯಿ ಸಂಪುಟದಲ್ಲಿ ವಿಜಯೇಂದ್ರಗೆ ಇಲ್ಲ ಸ್ಥಾನ: ಲಕ್ಷ್ಮಣ ಸವದಿ, ಶೆಟ್ಟರ್ ಸೇರಿ 6 ಸಚಿವರಿಗೆ ಕೊಕ್

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ, ವಿಜಯೇಂದ್ರ ಹೆಸರು ಈಗಿನ ಪಟ್ಟಿಯಲ್ಲಿ ಇಲ್ಲ. 29 ಶಾಸಕರು ಹೆಸರುಗಳು ಪಟ್ಟಿಯಲ್ಲಿ ಇವೆ ಎಂದು ಬೊಮ್ಮಾಯಿ ಸ್ಪಷ್ಟನೆ  ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮುಖಂಡರಾದ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದಾರೆ. ರಾಜ್ಯದ ಉಸ್ತುವಾರಿ ಹೊತ್ತಿರುವ ಅರುಣ್‌ ಸಿಂಗ್ ವಿಜಯೇಂದ್ರ ಅವರೊಂದಿಗೆ ಮಾತನಾಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇದರ ಜೊತೆಗೆ ಬಿಎಸ್ ವೈ ಸಂಪುಟದಲ್ಲಿ ಕಾರ್ಯ ನಿರ್ವಹಸಿದ್ದ ಆರು ಸಚಿವರಿಗೆ ಕೊಕ್ ನೀಡಲಾಗಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಸಿಪಿ ಯೋಗೇಶ್ವರ್, ಅರವಿಂದ ಲಿಂಬಾವಳಿ, ಶ್ರೀಮಂತ ಪಾಟೀಲ್ ಮತ್ತು ಶಂಕರ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಇದರ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯಗೆ ಮತ್ತೆ ನಿರಾಸೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT