ಎಸ್ ಎ ರಾಮದಾಸ್ 
ರಾಜಕೀಯ

'ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು'

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೂತನ ಸಚಿವ ಸಂಪುಟ ರಚನೆ ಮಾಡುತ್ತಿದ್ದಂತೆಯೇ ಮೂಲ ಬಿಜೆಪಿಗರಲ್ಲಿ ಅಸಮಾಧಾನದ ಕಟ್ಟೆಯೊಡೆಯುತ್ತಿದೆ.

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೂತನ ಸಚಿವ ಸಂಪುಟ ರಚನೆ ಮಾಡುತ್ತಿದ್ದಂತೆಯೇ ಮೂಲ ಬಿಜೆಪಿಗರಲ್ಲಿ ಅಸಮಾಧಾನದ ಕಟ್ಟೆಯೊಡೆಯುತ್ತಿದೆ. 

ಈ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿದ್ದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌ ಎ ರಾಮದಾಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್‌ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತಮ್ಮ ಪೋಸ್ಟ್‌ನಲ್ಲಿ ಅವರು, ‘ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು. ಕರ್ನಾಟಕವನ್ನು ದೇಶದಲ್ಲಿ ನಂಬರ್‌ 1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ. ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು’ ಎನ್ನುವ ಶಾಸಕ ರಾಮದಾಸ್‌ ಅವರ ಮಾತು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕೆಲವರನ್ನು ಕುರಿತು ವ್ಯಂಗ್ಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT