ಶಾಸಕ ಎನ್. ಮಹೇಶ್ 
ರಾಜಕೀಯ

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್‌.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್‌.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷವನ್ನು ಪ್ರತಿನಿಧಿಸುವ ಕೇಸರಿ ಶಾಲು ಹೊದಿಸಿ ಎನ್‌.ಮಹೇಶ್ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

2018ರ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದು ಗೆಲುವು ಸಾಧಿಸಿದ್ದ ಮಹೇಶ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದರು.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಬಿಎಸ್‌ಪಿ ರಾಜ್ಯದಲ್ಲಿ ಚುನಾವಣೆ ಎದುರಿಸಿತ್ತು. 71,792 ಮತಗಳನ್ನು ಪಡೆದು ಎನ್. ಮಹೇಶ್ ಗೆಲುವು ಸಾಧಿಸಿದ್ದರು. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಬಿಎಸ್‌ಪಿ ಅಭ್ಯರ್ಥಿಯೊಬ್ಬರು ಗೆದ್ದು ಶಾಸಕರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT