ಜಮೀರ್ ಅಹ್ಮದ್ ಖಾನ್-ಡಿ.ಕೆ.ಶಿವಕುಮಾರ್ 
ರಾಜಕೀಯ

'ಜಮೀರ್ ಅಹ್ಮದ್ ಖಾನ್ ಆಸ್ತಿ ಮೇಲೆ ಇಡಿ ದಾಳಿ ನಡೆಸಿದ್ದಕ್ಕೆ ಡಿಕೆಶಿವಕುಮಾರ್ ಗೆ ಖುಷಿಯಾಗಿದೆ'

ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ತಿ ಮೇಲೆ ಈಡಿ ದಾಳಿ ನಡೆಸಿದ್ದಕ್ಕೆ ಅವರದ್ದೇ ಪಕ್ಷದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಳಗೊಳಗೆ ಖುಷಿಯಾಗಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲ್ಮನೆ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ತಿ ಮೇಲೆ ಈಡಿ ದಾಳಿ ನಡೆಸಿದ್ದಕ್ಕೆ ಅವರದ್ದೇ ಪಕ್ಷದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಳಗೊಳಗೆ ಖುಷಿಯಾಗಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲ್ಮನೆ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.

ಇಎಂಐ ಹಗರಣ ಸಂಬಂಧ ಮಾಜಿ ಸಚಿವರಾದ ರೋಷನ್ ಬೇಗ್ ಹಾಗೂ ಜಮೀರ್ ಅಹ್ಮದ್ ಆಸ್ತಿಗಳ ಮೇಲೆ ಈಡಿ ರೇಡ್ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರವಿಕುಮಾರ್, ಡಿಕೆಶಿ, ಸಿದ್ದು ಕಾಲದಲ್ಲಿ ಏನೇನಾಗಿದೆಂದು ಪುಂಖಾನುಪುಂಕವಾಗಿ ಮಾಧ್ಯಮಗಳಲ್ಲಿ ತೋರಿಸಿದ್ದಾರೆ.ಎಐಸಿಯ ರಾಹುಲ್ ಗಾಂಧಿ, ಸೋನಿಯಾಗಾಂಧಿಯೂ ಸೇರಿದಂತೆ ಡಿ.ಕೆ ಶಿವಕುಮಾರ್ ಮೇಲೂ ಸಹ ಸಾಕಷ್ಟು ಪ್ರಕರಣದ ಆರೋಪಗಳಿವೆ. 

ಏನೇ‌ ದಾಳಿ ನಡೆದರೂ ಕಾಂಗ್ರೆಸಿಗರು ಬಿಜೆಪಿ ಮೇಲೆ ಬೆರಳು ಮಾಡಿ ತೋರಿಸುತ್ತಾರೆ. ಆದರೆ ಅವರು ತಮ್ಮ ಒಂದು ಬೆರಳನ್ನು ಬಿಜೆಪಿ ಕಡೆ ತೋರಿಸಿದರೆ ನಾಲ್ಕು ಬೆರಳು ಅವರ ಕಡೆ ತೋರಿಸುತ್ತವೆ ಎಂದು ಮಾರ್ಮಿಕವಾಗಿ ನುಡಿದರು.

ಜಮೀರ್ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಕ್ಕೆ ಡಿ.ಕೆ ಶಿವಕುಮಾರ್ ಒಳಗೊಳಗೇ ಬಹಳ ಖುಷಿಯಾಗಿದ್ದಾರೆ. ಸಿದ್ದರಾಮಯ್ಯನವರಿಗೂ ಗೊತ್ತಾಗಬಾರದೆಂದು ಡಿಕೆಶಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ದ್ವಂದ್ವ ನಿಲುವಿನಲ್ಲಿ ಹೇಳಿಕೆ ನೀಡುತ್ತಾರೆ ಎಂದು ರವಿಕುಮಾರ್ ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ