ಯಡಿಯೂರಪ್ಪ 
ರಾಜಕೀಯ

ಯಡಿಯೂರಪ್ಪಗೂ ಸಂಪುಟ ದರ್ಜೆ ಸ್ಥಾನಮಾನ ಕೊಟ್ಟ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ತಮಗೆ ಅಧಿಕಾರ ದೊರೆಯಲು ಮುಖ್ಯ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ತಮಗೆ ಅಧಿಕಾರ ದೊರೆಯಲು ಮುಖ್ಯ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ  ದೊರಕಿಸಿ ಕೊಟ್ಟಿದ್ದಾರೆ.

ಈ ಸಂಬಂಧ ಆಡಳಿತ ಮತ್ತು ಸುಧಾರಣೆ ಇಲಾಖೆ ಇಂದು ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿ ಇರುವವರೆಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ  ಸ್ಥಾನ ಅಬಾಧಿತವಾಗಿ ಮುಂದುವರಿಯಲಿದೆ. 

ಇದಲ್ಲದೆ ತಿಂಗಳಿಗೆ ಮೂರು ಲಕ್ಷ ರೂ ಭತ್ಯೆ ಜೊತೆಗೆ ಒಂದು ಲಕ್ಷ ರೂಪಾಯಿ ಬಾಡಿಗೆ ಹಾಗೂ ಸಾರಿಗೆಭತ್ಯೆ ಪಡೆಯಲು ಯಡಿಯೂರಪ್ಪನವರು ಅರ್ಹರಾಗಿರುತ್ತಾರೆ. 

ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಅವರಿಗೆ ಈ ಸೌಲಭ್ಯ ಕಲ್ಪಿಸಿ ಕೊಟ್ಟಿರಲಿಲ್ಲ. ಲಾಭದಾಯಕ ಹುದ್ದೆ ಕಾಯ್ದೆ ಅಡ್ಡಿ ಬರಬಹುದು ಎಂಬ ಕಾರಣಕ್ಕಾಗಿ ಆಗಿನ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಸಿದ್ದರಾಮಯ್ಯ ಅವರಿಗೆ ಇಂತಹ ಅವಕಾಶ ಮಾಡಿಕೊಟ್ಟಿರಲಿಲ್ಲ.      

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT