ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

ಸಾಲು-ಸಾಲು ಚುನಾವಣೆಗಳು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮುಂದಿರುವ ಬಹುದೊಡ್ಡ ಸವಾಲು!

ಹಲವು ಸಮಯಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆಯ ವಿಷಯ ಹರಿದಾಡಲು ಆರಂಭಿಸಿದ ನಂತರ ಕೊನೆಗೂ ಕಳೆದ ಜುಲೈ 28ರಂದು ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಹಾಗೂ ಅವರ ನೇತೃತ್ವದ ಮಂತ್ರಿಮಂಡಲಕ್ಕೆ ಆಗಸ್ಟ್ 4ರಂದು 29 ಸಚಿವರು ಸೇರ್ಪಡೆಗೊಳ್ಳುವವರೆಗೆ ಬಂದು ನಿಂತಿತು.

ಬೆಂಗಳೂರು: ಹಲವು ಸಮಯಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆಯ ವಿಷಯ ಹರಿದಾಡಲು ಆರಂಭಿಸಿದ ನಂತರ ಕೊನೆಗೂ ಕಳೆದ ಜುಲೈ 28ರಂದು ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಹಾಗೂ ಅವರ ನೇತೃತ್ವದ ಮಂತ್ರಿಮಂಡಲಕ್ಕೆ ಆಗಸ್ಟ್ 4ರಂದು 29 ಸಚಿವರು ಸೇರ್ಪಡೆಗೊಳ್ಳುವವರೆಗೆ ಬಂದು ನಿಂತಿತು.

ಇದೀಗ ಸಿಎಂ ಬೊಮ್ಮಾಯಿಯವರಿಗಿರುವ ಮುಂದಿನ ಸವಾಲು ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಬರುವ ಸರಣಿ ಚುನಾವಣೆಗಳನ್ನು ಗೆಲ್ಲುವುದು. ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆಗಳು ಮತ್ತು ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳು 2023ರ ವಿಧಾನಸಭೆ ಚುನಾವಣೆಗೆ ಮುನ್ನ ಇವೆ.

ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 19 ವಿಧಾನಸಭಾ ಕ್ಷೇತ್ರಗಳು ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗಳು ನಡೆದಿದ್ದವು. ಬಿಜೆಪಿ 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2020ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕೂಡ ಕೇಸರಿ ಪಡೆ ಉತ್ತಮ ಸಾಧನೆ ತೋರಿದೆ ಎಂದು ಪಕ್ಷ ಹೇಳಿಕೊಂಡಿತ್ತು. ರಾಜ್ಯ ಚುನಾವಣಾ ಆಯೋಗ ನ್ಯಾಯಾಲಯದ ಆದೇಶದ ಪ್ರಕಾರ 52 ನಗರ ಸ್ಥಳೀಯ ಸಂಸ್ಥೆಗಳಿಗೆ ಅದರಲ್ಲೂ ಉತ್ತರ ಕರ್ನಾಟಕದ ಭಾಗಗಳಿಗೆ ಚುನಾವಣೆ ನಡೆಸಲಿದೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮತ್ತು ಬೆಳಗಾವಿ ನಗರ ಪಾಲಿಕೆ, ದೊಡ್ಡಬಳ್ಳಾಪುರ ಮತ್ತು ತರೀಕೆಗೆ ಪುರಸಭೆಗಳಿಗೆ ಸೇರಿದಂತೆ 52 ನಗರ ಸ್ಥಳೀಯ ಸಂಸ್ಥೆಗಳಿಗೆ ಆದಷ್ಟು ಶೀಘ್ರ ಚುನಾವಣೆ ನಡೆಸಬೇಕಿದೆ ಎಂದರು.

ಇನ್ನು ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಚುನಾವಣೆ ನಡೆಸಬೇಕಿದೆ. ಮೇ-ಜೂನ್ ತಿಂಗಳಲ್ಲಿ ಇಲ್ಲಿಗೆ ಚುನಾವಣೆ ನಡೆಯಬೇಕಿದ್ದವು. ಕೋವಿಡ್-19 ಸಾಂಕ್ರಾಮಿಕ ಕಾರಣದಿಂದ ನಡೆಸಿರಲಿಲ್ಲ. ಈ ಬಗ್ಗೆ ಕೇಳಿದಾಗ ಚುನಾವಣಾ ಆಯುಕ್ತರು, ನಾವು ಚುನಾವಣಾ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ. ಕರಡು ಮೀಸಲು ಸಿದ್ದವಾಗಿದ್ದು ಆಕ್ಷೇಪಗಳಿದ್ದರೆ ತಿಳಿಸಲು ಕೋರಿದ್ದೇವೆ. ಅಂತಿಮ ಪಟ್ಟಿಯನ್ನು ಸಿದ್ದಪಡಿಸಿದ ಕೂಡಲೇ 45 ದಿನಗಳಲ್ಲಿ ಚುನಾವಣಾ ದಿನಾಂಕ ಘೋಷಿಸುತ್ತೇವೆ. ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಬಹುಶಃ ಚುನಾವಣೆ ನಡೆಯಲಿದೆ ಎಂದರು.

ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ಶಾಸಕ ಎಂಸಿ ಮನಗುಳಿ ಮತ್ತು ಬಿಜೆಪಿ ಶಾಸಕ ಸಿ ಎಂ ಉದಾಸಿಯವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಸಬೇಕಿದೆ. ಹಾವೇರಿ ಜಿಲ್ಲೆಯ ಸಿಂದಗಿ ತಾಲ್ಲೂಕು ಸಿಎಂ ಬೊಮ್ಮಾಯಿಯವರು ತವರು ಕ್ಷೇತ್ರ ಮುಂದಿನ ಉಪ ಚುನಾವಣೆ ಗೆಲ್ಲುವುದು ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಬಿಬಿಎಂಪಿ ಚುನಾವಣೆ ಸಹ ಬಾಕಿ ಉಳಿದಿದ್ದು ಅದಿನ್ನೂ ನ್ಯಾಯಾಲಯದ ಮುಂದೆ ಇತ್ಯರ್ಥವಾಗಬೇಕಿದೆ. ನಗರಪಾಲಿಕೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಬೆಂಗಳೂರಿನ ಏಳು ಮಂದಿ ಶಾಸಕರಿಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT