ಸಿಟಿ ರವಿ ದೇವೇಗೌಡ ಭೇಟಿ 
ರಾಜಕೀಯ

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಸಿ.ಟಿ. ರವಿ; ಬಹಳ ಹೊತ್ತು ಮಾತುಕತೆ!

ದೆಹಲಿಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ದೆಹಲಿಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ರವಿ ಮತ್ತು ದೇವೇಗೌಡರ ಭೇಟಿ ಸಹಜವಾಗಿಯೇ ರಾಜ್ಯದ ರಾಜಕೀಯ ನಾಯಕರು ಹಾಗೂ ಜನ ಸಾಮಾನ್ಯರಲ್ಲಿ ಕುತೂಹಲ ಮೂಡಿಸಿದೆ. ಬಹಳ ಹೊತ್ತು ಇಬ್ಬರೂ ನಾಯಕರು ರಾಜಕೀಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿರುವ ಮಾಹಿತಿ ಸಿಕ್ಕಿದೆ.

ಜೊತೆಗೆ ಭೇಟಿಯ ಬಳಿಕ ಎಚ್.ಡಿ. ದೇವೇಗೌಡರನ್ನು ಸಿಟಿ ರವಿ ಮನತುಂಬಿ ಹೊಗಳಿರುವುದು ವಿಶೇಷ. ಅಷ್ಟಕ್ಕೂ ಸಿ.ಟಿ. ರವಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿರುವುದು ಯಾವುದೇ ರಾಜಕೀಯ ಕಾರಣದ ಹಿನ್ನೆಯಿಂದಲ್ಲ. ಬದಲಿಗೆ ಮಾಜಿ ಸಚಿವ ಸಿ.ಟಿ. ರವಿ ಭಾರತದ ರಾಜಕೀಯದ ಮೇಲೆ ಪಿಎಚ್‌ಡಿ ಮಾಡುತ್ತಿದ್ದಾರೆ. 

ಸಂಶೋಧನೆಯ ವಿಷಯದ ಭಾಗವಾಗಿ ದೇವೇಗೌಡರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಭೇಟಿ ಬಳಿಕ, ಭಾರತದ ರಾಜಕೀಯದ ಕುರಿತು ಮಾಜಿ ಪ್ರಧಾನಿ ದೇವೇಗೌಡರಿಗೆ ಇರುವ ಆಳವಾದ ಜ್ಞಾನವನ್ನು ಸಿ.ಟಿ. ರವಿ ಮನತುಂಬಿ ಹೊಗಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!