ಕೇಂದ್ರದ ನೂತನ ಸಚಿವರು 
ರಾಜಕೀಯ

ಕೇಂದ್ರದ ನೂತನ ಸಚಿವರನ್ನು ಜನರಿಗೆ ಪರಿಚಯಿಸುವ 'ಜನಾಶೀರ್ವಾದ' ಯಾತ್ರೆ ಆಗಸ್ಟ್ 16 ರಿಂದ ಆರಂಭ

ಸಂಸತ್‌ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿಪಡಿಸಿದ್ದರಿಂದ ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಇದೇ 16 ರಿಂದ ರಾಜ್ಯದಲ್ಲೂ ಬಿಜೆಪಿ ‘ಜನಾಶೀರ್ವಾದ ಯಾತ್ರೆ’ ಕೈಗೊಂಡಿದೆ.

ಬೆಂಗಳೂರು: ಸಂಸತ್‌ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿಪಡಿಸಿದ್ದರಿಂದ ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಇದೇ 16 ರಿಂದ ರಾಜ್ಯದಲ್ಲೂ ಬಿಜೆಪಿ ‘ಜನಾಶೀರ್ವಾದ ಯಾತ್ರೆ’ ಕೈಗೊಂಡಿದೆ.

ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರದಲ್ಲಿ ಹೊಸಧಿಕಾರ ಸ್ವೀಕರಿಸಿದ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿ ಪಡಿಸಿದ ಘಟನೆ ಅತ್ಯಂತ ದುರದೃಷ್ಟಕರ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು, ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಆಗಸ್ಟ್ 16 ರಿಂದ “ಜನಾಶೀರ್ವಾದ ಯಾತ್ರೆ” ನಡೆಸಲು ನಿರ್ಧರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅವರು ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಉದ್ದಗಲಕ್ಕೆ ಜನಾಶೀರ್ವಾದ ಯಾತ್ರೆ ತೆರಳಲಿದೆ. ರಾಜ್ಯದಲ್ಲಿ ನಾಲ್ಕು ತಂಡಗಳು ಸಂಚರಿಸಲಿದ್ದು, ಸಚಿವರಾದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಮತ್ತು ಭಗವಂತ ಖೂಬಾ ಅವರ ನೇತೃತ್ವದಲ್ಲಿ ಈ ತಂಡಗಳು ಪ್ರವಾಸ ಮಾಡಲಿವೆ. ಇದಕ್ಕಾಗಿ ಸಂಚಾಲಕರು, ಸಹ ಸಂಚಾಲಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿಮೀ ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 25 ಕಂದಾಯ ಜಿಲ್ಲೆಗಳಲ್ಲಿ 161 ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಕೇಂದ್ರ ಸರ್ಕಾರವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ಯೋಜನೆಗಳು, ರೈತರ ಆದಾಯ ದ್ವಿಗುಣ, ದೀನದಲಿತರು, ಬಡವರ ಅಭ್ಯುದಯಕ್ಕಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ. ದೀಪಾವಳಿ ವರೆಗೆ ಬಡವರಿಗೆ ಉಚಿತ ಪಡಿತರ ನೀಡುತ್ತಿದ್ದು, ಲಸಿಕಾ ಕೇಂದ್ರ, ರೇಶನ್ ಅಂಗಡಿಗಳಿಗೆ ಈ ಯಾತ್ರೆ ಭೇಟಿ ಕೊಡಲಿದೆ ಎಂದು ವಿವರಿಸಿದರು.

ರಸಗೊಬ್ಬರದ ಅಂಗಡಿಗೆ ಭೇಟಿ ನೀಡಿ ಗೊಬ್ಬರ ಸರಿಯಾಗಿ ಸಿಗುತ್ತಿದೆಯೇ ಎಂದು ಮಾಹಿತಿ ಪಡೆಯಲಾಗುವುದು. ಸಾಹಿತಿಗಳು, ಗಡಿ ಕಾಯುವ ಯೋಧರ ಮನೆ, ಗಣ್ಯ ವ್ಯಕ್ತಿಗಳ ಮನೆ, ಜನಸಂಘ ಮತ್ತು ಬಿಜೆಪಿಯ ಹಿರಿಯ ನಾಯಕರ ಮನೆಗಳಿಗೆ ಭೇಟಿ ಕೊಟ್ಟು ಅವರ ಆಶೀರ್ವಾದ ಪಡೆಯಲಾಗುವುದು ಎಂದರು. ಬಳಿಕ ಯಾತ್ರೆಯ ರೂಟ್ ಮ್ಯಾಪ್ ಅನ್ನೂ ಅವರು ಬಿಡುಗಡೆಗೊಳಿಸಿದರು. ಕೋವಿಡ್ ನಿಯಮಾವಳಿ ಕಡ್ಡಾಯವಾಗಿ ಪಾಲಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT