ಗೋಪಾಲಯ್ಯ 
ರಾಜಕೀಯ

ಸಂಘ ಪರಿವಾರದವರ ಮನೆಗೆ ತೆರಳಲು ಸಚಿವರಿಗೆ ಸೂಚನೆ: ಗೋಪಾಲಯ್ಯ

ಸಚಿವರುಗಳಿಗೆ ಪ್ರತಿದಿನ ಜಿಲ್ಲೆಗಳಿಗೆ ಭೇಟಿ ನೀಡಿ, ಬಿಜೆಪಿ ಕಾರ್ಯಾಲಯಕ್ಕೆ ತೆರಳಿ ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದು ಸೇರಿದಂತೆ ಸಂಘ ಪರಿವಾರದವರ ಮನೆಗೆ ಭೇಟಿ ಮಾಡಲು ನಮ್ಮ ರಾಷ್ಟ್ರೀಯ ಅಧ್ಯಕ್ಷರು....

ಬೆಂಗಳೂರು: ಸಚಿವರುಗಳಿಗೆ ಪ್ರತಿದಿನ ಜಿಲ್ಲೆಗಳಿಗೆ ಭೇಟಿ ನೀಡಿ, ಬಿಜೆಪಿ ಕಾರ್ಯಾಲಯಕ್ಕೆ ತೆರಳಿ ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದು ಸೇರಿದಂತೆ ಸಂಘ ಪರಿವಾರದವರ ಮನೆಗೆ ಭೇಟಿ ಮಾಡಲು ನಮ್ಮ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯ ಅಧ್ಯಕ್ಷರು ಸೂಚಿಸಿರುವುದಾಗಿ ಅಬಕಾರಿ ಸಚಿವ ಗೋಪಾಲಯ್ಯ ಅವರು ಸೋಮವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೋಪಾಲಯ್ಯ, ಪ್ರತಿ ಗುರುವಾರ ವಿಧಾನಸೌಧದಲ್ಲಿ ಇದ್ದು ಅಹವಾಲು ಸ್ವೀಕಾರಕ್ಕೆ ಹಿಂದಿನಿಂದಲೂ ಯಡಿಯೂರಪ್ಪ ಅವರ ಕಾಲದಿಂದಲೂ ಮಾಡುತ್ತಿದ್ದೇವೆ ಎಂದರು.

ಜಗನ್ನಾಥ ಭವನದಲ್ಲಿ ಕೂಡ ಕಾರ್ಯಕರ್ತರ ಸಮಸ್ಯೆ ಆಲಿಸಿ ಸ್ಪಂದಿಸುವುದು. ಸಾರ್ವಜನಿಕರ ಮತ್ತು ಕಾರ್ಯಕರ್ತರ ಸಮಸ್ಯೆ ಆಲಿಸುವ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ 11 ರಿಂದ 1 ಗಂಟೆವರೆಗೂ ಸಮಸ್ಯೆ ಆಲಿಸಿ ಆಯಾ ಇಲಾಖೆ ಅಧಿಕಾರಿಗಳಿಗೆ ಸೂಚಿಸುತ್ತೇವೆ ಎಂದರು.

ಇಲಾಖೆಯಿಂದ ಸಚಿವರಿಗೆ ಹಫ್ತ ಕೊಡುವ ಆಡಿಯೋ ವಿಚಾರವಾಗಿ ಪ್ರತಿಕ್ರಿಯಿಸಿದ ಗೋಪಾಲಯ್ಯ, ಆ ಬಗ್ಗೆ ತನಿಖೆ ನಡೆಸುವಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಿದ್ದು, ಶೀಘ್ರವೇ ವರದಿ ಬರಲಿದೆ ಎಂದರು.

ಅಬಕಾರಿ ಇಲಾಖೆಯನ್ನು ತಮಗೆ ನೀಡಿದ್ದು ಅದರಲ್ಲಿ ಸಾಧನೆ ಮಾಡಿ, ಇಲಾಖೆಯನ್ನು ಲಾಭದಾಯಕ ಹಾದಿಯಲ್ಲಿ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡುವುದಾಗಿ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿಗೆ ಬಂದಿರುವ ಯಾವುದೇ ಶಾಸಕರಿಗೆ ಅನ್ಯಾಯವಾಗುವುದಿಲ್ಲ ಎಂಬ ವಿಶ್ವಾಸವನ್ನು ಅಬಕಾರಿ ಸಚಿವ ಕೆ ಗೋಪಾಲಯ್ಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!