ಸಾಂದರ್ಭಿಕ ಚಿತ್ರ 
ರಾಜಕೀಯ

ಪಕ್ಷದ ಕಾರ್ಯಕರ್ತರ ಕುಂದುಕೊರತೆ ಆಲಿಸಲು ಜಿಲ್ಲಾ ಸಚಿವರಿಗೆ ಸೂಚನೆ

ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣಾ ಸಮಯವಾದ್ದರಿಂದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಲು ನೆರವಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕರು ಮತ್ತು ತಳಮಟ್ಟದ ಕಾರ್ಯಕರ್ತರ ನಡುವೆ ಉತ್ತಮ ಸಮನ್ವಯವನ್ನು ಸಾಧಿಸುವ ಉದ್ದೇಶದಿಂದ, ಕುಂದುಕೊರತೆಗಳನ್ನು ಪರಿಹರಿಸಲು ಆಯಾ ಜಿಲ್ಲೆಯ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸುವ ಕೆಲಸವನ್ನು ಜಿಲ್ಲಾ ಮಂತ್ರಿಗಳಿಗೆ ನೀಡಲಾಗಿದೆ.

ಇದರಿಂದ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣಾ ಸಮಯವಾದ್ದರಿಂದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಲು ನೆರವಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಅಲ್ಲದೆ, ಪಕ್ಷದ ಕೇಂದ್ರ ನಾಯಕತ್ವವು ಮಂತ್ರಿಗಳಿಗೆ ವಾರದಲ್ಲಿ ಒಂದು ಬಾರಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಸೂಚಿಸಿದೆ. ಬೆಂಗಳೂರಿನ ಪಕ್ಷದ ರಾಜ್ಯ ಮುಖ್ಯ ಕಚೇರಿಗೆ ಭೇಟಿ ನೀಡುವಂತೆ ಕೂಡ ಕೇಂದ್ರ ನಾಯಕರು ತಿಳಿಸಿದ್ದಾರೆ. ಪ್ರತಿ ದಿನ ಇಬ್ಬರು ಸಚಿವರು ಕಚೇರಿಗೆ ಭೇಟಿ ನೀಡಲಿದ್ದಾರೆ. ನಾನು ಪ್ರತಿ ಸೋಮವಾರ ಕಚೇರಿಗೆ ಭೇಟಿ ನೀಡುತ್ತಿದ್ದೇನೆ ಎಂದು ಸೋಮವಾರ ಪಕ್ಷದ ಕಚೇರಿಗೆ ಭೇಟಿ ನೀಡಿದ ಅಬಕಾರಿ ಸಚಿವ ಕೆ ಗೋಪಾಲಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT