ಸಿಟಿ ರವಿ 
ರಾಜಕೀಯ

'ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿಯಂತಹವರೇ ನಿಜವಾದ ದೇಶದ್ರೋಹಿಗಳು'

ದೇಶದ ಒಳಿತಿಗಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿಯಂತಹವರೇ ನಿಜವಾದ ದೇಶದ್ರೋಹಿಗಳು’ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.

ಮಂಗಳೂರು: ದೇಶದ ಒಳಿತಿಗಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿಯಂತಹವರೇ ನಿಜವಾದ ದೇಶದ್ರೋಹಿಗಳು’ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂದರೆ ಎಲ್ಲವೂ ತಾನೇ ಎಂದು ರವಿ ಭಾವಿಸಿದಂತಿದೆ. ಮೇಕೆದಾಟು ವಿಷಯದಲ್ಲಿ ಕರ್ನಾಟಕದ ಪರ ನಿಲ್ಲಬೇಕಿದ್ದ ರವಿ, ತಮಿಳುನಾಡು ಪರ ನಿಂತಿರುವುದು ಅಕ್ಷಮ್ಯ. ಇತಿಹಾಸ ಜ್ಞಾನವಿಲ್ಲದ, ಸಾಮಾಜಿಕ ಹಿನ್ನಲೆಯೂ ಇಲ್ಲದ ಮತ್ತು ದೇಶಕ್ಕೆ ಅಪಾರ ಕೊಡುಗೆ ನೀಡಿದವರ ಬಗ್ಗೆ ಅಸಂಬದ್ಧವಾಗಿ, ಹಗುರವಾಗಿ ಮಾತನಾಡುವ ಸಿಟಿ ರವಿ ಅಂಥವರಿಗೆ ಬಿಜೆಪಿ ಮಣೆ ಹಾಕುತ್ತಿರುವುದು ವಿಪರ್ಯಾಸ’ ಎಂದರು.

ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ ಮಹಾತ್ಮರ ಹೆಸರನ್ನು ಬದಲಾಯಿಸುವ ಮತ್ತು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಬಿಜೆಪಿಗರು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಸ್ಮಾರಕಗಳ ಹೆಸರನ್ನೂ ಕೂಡ ಬದಲಾಯಿಸಿದರೂ ಅಚ್ಚರಿಯಿ‌ಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?