ಡಿಕೆ ಶಿವಕುಮಾರ್ 
ರಾಜಕೀಯ

ದೇಶಕ್ಕೆ ಸ್ವಾತಂತ್ರ್ಯ ತಂದವರು ಸಿ.ಟಿ. ರವಿ: ಡಿಕೆ ಶಿವಕುಮಾರ್ ವ್ಯಂಗ್ಯ

ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ಸ್ವಾತಂತ್ರ್ಯ ಬಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: 'ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ಸ್ವಾತಂತ್ರ್ಯ ಬಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ' ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರು ಇಂದು ಭಾನುವಾರ ಕೇಳಿದ ಪ್ರಶ್ನೆಗೆ ಶಿವಕುಮಾರ್ ಈ ರೀತಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ನವರು ಮಾನಸಿಕ ಅಸ್ವಸ್ಥರು ಎಂಬ ಸಿಟಿ ರವಿ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಈಗ ತಕ್ಷಣ ನಾನು ನಿಮ್ಹಾನ್ಸ್ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತೇನೆ. ಸಿಟಿ ರವಿ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತೇನೆ ಎಂದರು.

ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲಿನ ಇಡಿ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,  ಜಮೀರ್ ಅಹಮದ್ ಈಗಾಗಲೇ ನನ್ನ ತಪ್ಪಿಲ್ಲ ಅಂತ ಹೇಳಿಕೆ ಕೊಟ್ಟಿದ್ದಾರೆ. ಈ ವಿಚಾರದಲ್ಲಿ ಹೆಚ್ಚು ಕಮೆಂಟ್ ಮಾಡಲು ಹೋಗಲ್ಲ. ಆದರೆ ಇಡೀ ದೇಶದಲ್ಲಿ ಎಲ್ಲ ಕಡೆಯೂ ಹೀಗೆಯೇ ಆಗುತ್ತಿದೆ. ಇದರ ವಿರುದ್ಧ ನಾವೂ ಕೂಡಾ ಹೋರಾಟ ಮಾಡುತ್ತಿರುವುದಾಗಿ ತಿಳಿಸಿದರು.

ವಿನಯ ಕುಲಕರ್ಣಿ ಯನ್ನು ಪೂರ್ಣ ಪ್ರಮಾಣದಲ್ಲಿ ಪಕ್ಷದ ಕೆಲಸಕ್ಕೆ ಬಳಸಿಕೊಳ್ಳುತ್ತೇವೆ. ಅದರಲ್ಲಿ ಅನುಮಾನವೇ ಬೇಡ. ಜಮೀರ್ ಹಾಗೂ ವಿನಯ್ ಕುಲಕರ್ಣಿ ಪರ ನಮ್ಮ ಪಕ್ಷ ಇದೆ ಎಂದು ಭರವಸೆ ನೀಡಿದರು. ವಿನಯ್ ಕುಲಕರ್ಣಿ ವಿರುದ್ದ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಕೇಸ್ ಮಾಡಿದ್ದಾರೆ. ಬಹಳ ಸಂತೋಷ, ಆದರೆ ಇವರ ಕೇಂದ್ರ ಮಂತ್ರಿಗಳು ಎಲ್ಲ ನಿಯಮ ಪಾಲನೆ ಮಾಡಿದ್ದಾರಾ? ಕೇಂದ್ರ ಸಚಿವರಿಗೆ ಒಂದು ಕಾನೂನಾ? ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ