ರಾಜಕೀಯ

ಜೆಡಿಎಸ್ ನಿಂದ ಮತ್ತೊಬ್ಬ ಪ್ರಭಾವಿ ನಾಯಕ ಹೊರಕ್ಕೆ: ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರಲಿರುವ ಜಿಟಿ ದೇವೇಗೌಡ!

Sumana Upadhyaya

ಮೈಸೂರು: ಪಂಚಾಯತ್ ಚುನಾವಣೆ ರಾಜ್ಯದಲ್ಲಿ ಸದ್ಯದಲ್ಲಿಯೇ ಇದೆ. ಇದು ಮುಂಬರುವ ವಿಧಾನಸಭೆ ಚುನಾವಣೆಗೆ ಸೆಮಿ ಫೈನಲ್ ಪಂದ್ಯದ ರೀತಿಯಲ್ಲಿ. ಈ ಸಂದರ್ಭದಲ್ಲಿ ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದು ರಾಜಕೀಯ ಧ್ರುವೀಕರಣವಾಗಲಿದೆ ಎಂದು ಹೇಳಲಾಗುತ್ತಿದೆ.

ಪಂಚಾಯತ್ ಚುನಾವಣೆಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಸೀಟುಗಳನ್ನು ಗೆಲ್ಲಲು ಉತ್ಸುಕರಾಗಿರುವ ಕಾಂಗ್ರೆಸ್ ತನ್ನ ತವರು ನೆಲವಾದ ಹಳೆ ಮೈಸೂರಿನಲ್ಲಿ ಅಧಿಕಾರವನ್ನು ಮತ್ತೆ ಪಡೆದು ಹಿಡಿತ ಸಾಧಿಸಲು ನೋಡುತ್ತಿದೆ. ಪಕ್ಷವು ಈ ವಲಯದಲ್ಲಿ ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಪ್ರಮುಖ ನಾಯಕರನ್ನು ತನ್ನ ತೆಕ್ಕೆಗೆ ಸೆಳೆಯಬೇಕೆಂದು ಸ್ವತಃ ಸಿದ್ದರಾಮಯ್ಯ ಅವರಿಗೆ ತಿಳಿದಿದೆ, ಇಲ್ಲಿ ಜೆಡಿಎಸ್ ನ್ನು ದುರ್ಬಲಗೊಳಿಸಲು ನೋಡುತ್ತಿದೆ.

ಜೆಡಿಎಸ್ ನಿಂದ ಮೊದಲ ದೊಡ್ಡ ನಿರ್ಗಮನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಅವರು ಈಗಾಗಲೇ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರ ಪುತ್ರ ಹರೀಶ್ ಜೊತೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಯಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ದೇವೇಗೌಡ ಮತ್ತು ಅವರ ಪುತ್ರ ಇಬ್ಬರಿಗೂ ಅವಕಾಶ ನೀಡಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಒಲವು ಹೊಂದಿಲ್ಲ ಎಂದು ಹೇಳಲಾಗಿದ್ದು, ಒಬ್ಬರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಮತ್ತು ಇನ್ನೊಬ್ಬರು ಮೈಸೂರು ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿಯಾಗಬಹುದು ಎಂದು ಸೂಚಿಸಿದ್ದಾರೆ. ಆದರೆ ದೇವೇಗೌಡರು ಚಾಮುಂಡೇಶ್ವರಿ ಮತ್ತು ಹುಣಸೂರು ವಿಧಾನಸಭಾ ಕ್ಷೇತ್ರಗಳಿಂದ ಟಿಕೆಟ್ ನೀಡಬೇಕೆಂದು ಒತ್ತಾಯಿಸುತ್ತಿದ್ದು, ಎರಡೂ ಸ್ಥಾನಗಳಿಂದ ಗೆಲ್ಲಬಹುದು ಎಂದು ಹೇಳಿಕೊಂಡಿದ್ದಾರೆ.

ಆದರೆ ದೇವೇಗೌಡರಿಗೆ ತಮಗೆ ಮತ್ತು ತಮ್ಮ ಪುತ್ರರಿಗೆ ಚಾಮುಂಡೇಶ್ವರಿ ಮತ್ತು ಹುಣಸೂರು ಕ್ಷೇತ್ರಗಳಿಂದ ಸ್ಪರ್ಧಿಸಬೇಕೆಂಬ ಇಚ್ಛೆಯಿದೆ.ಈ ಎರಡೂ ಕ್ಷೇತ್ರಗಳಲ್ಲಿ ನಿಂತರೆ ತಾವು ನಿಲ್ಲಬಹುದು ಎಂಬ ಇಚ್ಛೆ ಅವರದ್ದು.

ದೇವೇಗೌಡರು ತಮ್ಮ ರಾಜಕೀಯ ನಡೆ ಕುರಿತು ತಮ್ಮ ಅನುಯಾಯಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಅವರ ಪುತ್ರ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ ಕಾಂಗ್ರೆಸ್ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜಿ ಟಿ ದೇವೇಗೌಡರು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಲಾಗಿದೆ. ದೇವೇಗೌಡರು ತಮ್ಮ ಅನುಯಾಯಿಗಳಿಗೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಅವಕಾಶ ನೀಡಬೇಕೆಂದು ಬಯಸಿದ್ದರು.

ಈ ಮಧ್ಯೆ, ಕೆಲವು ಹಿರಿಯ ಜೆಡಿಎಸ್ ನಾಯಕರು ಜಿ ಟಿ ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಉತ್ಸುಕರಾಗಿದ್ದು, ಅವರೊಂದಿಗೆ ಮಾತುಕತೆ ನಡೆಸುವಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಮನವಿ ಮಾಡಿದ್ದಾರೆ. ಆದರೆ ದೇವೇಗೌಡರು ಪದೇ ಪದೇ ಜೆಡಿಎಸ್ ವರಿಷ್ಠರಿಗೆ ಮನವಿ ಮಾಡಿದ್ದು, ಸಿದ್ದರಾಮಯ್ಯ ಅವರಿಗೆ ತಾನು ಮಾತು ಕೊಟ್ಟಿದ್ದು ಅದರಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಸಚಿವ ಸಾ ರಾ ಮಹೇಶ್ ಜೊತೆಗೆ ರಾಜಕೀಯ ಪೈಪೋಟಿಯಿಂದಾಗಿ ಆಂತರಿಕ ಕಚ್ಚಾಟದಿಂದ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು ಸೋಲಿಸಿದರೆ ಉತ್ತಮ ಹುದ್ದೆ ನೀಡುವುದಾಗಿ ಹೆಚ್ ಡಿ ಕುಮಾರಸ್ವಾಮಿ ಆಶ್ವಾಸನೆ ನೀಡಿ ನಂತರ ಬಂದ ಮೈತ್ರಿ ಸರ್ಕಾರದಲ್ಲಿ ಜಿ ಟಿ ದೇವೇಗೌಡ ಅವರಿಗೆ ಉನ್ನತ ಶಿಕ್ಷಣ ಸಚಿವ ಸ್ಥಾನ ನೀಡಲಾಗಿದ್ದು. ಸಹಕಾರ ಸಚಿವನಾಗಿ ಮಾಡಬೇಕೆಂದು ಕೇಳಿಕೊಂಡ ಅವರ ಮನವಿಯನ್ನು ಹೆಚ್ ಡಿ ಕುಮಾರಸ್ವಾಮಿ ಪುರಸ್ಕರಿಸಿರಲಿಲ್ಲ.

ನಂತರ ಜಿ ಟಿ ದೇವೇಗೌಡರು ಹುಣಸೂರು ಉಪಚುನಾವಣೆಯ ಪ್ರಚಾರದಿಂದ ದೂರ ಉಳಿದು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರು.

SCROLL FOR NEXT