ಎಎಪಿ ಲೋಗೋ 
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯದ ದೊಡ್ಡ ಹೋರಾಟಕ್ಕೆ ಸಣ್ಣ ಪಕ್ಷಗಳು ಸಜ್ಜು!

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾವುದೇ ಅಸ್ಥಿತ್ವವಿಲ್ಲದ ಸಣ್ಣ ಪುಟ್ಟ ಪಕ್ಷಗಳು ಕೂಡ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗುತ್ತಿವೆ.

ತುಮಕೂರು: ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾವುದೇ ಅಸ್ಥಿತ್ವವಿಲ್ಲದ ಸಣ್ಣ ಪುಟ್ಟ ಪಕ್ಷಗಳು ಕೂಡ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗುತ್ತಿವೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಕಾರ್ಪೋರೇಷನ್ ಗೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಆರಂಭವಾಗಲಿರುವ ಮೊದಲ ಪರೀಕ್ಷೆಯು ಬಿಬಿಎಂಪಿ ಚುನಾವಣೆಯವರೆಗೂ ಮುಂದುವರಿಯಬಹುದು. ಬಿಬಿಎಂಪಿ ಚುನಾವಣೆ ಈ ವರ್ಷದ ಅಂತ್ಯದಲ್ಲಿ ನಡೆಯುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಜನ ಎಎಪಿಯನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಅಲ್ಪ ಸಂಖ್ಯಾತ ಸಮುದಾಯದ ಬೆಂಬಲದೊಂದಿಗೆ ಎಎಪಿ ಕಣಕ್ಕಿಳಿಯುತ್ತಿದೆ.

ಸ್ಥಳದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವ ಮೂಲಕ ವಿಶ್ವ ದರ್ಜೆಯ ನಗರಗಳಲ್ಲಿ ನಾವು ಮಹಿಳೆಯರು ಮತ್ತು ಯುವಕರ ಮತಗಳನ್ನು ಗುರಿಯಾಗಿಸಿಕೊಂಡಿದ್ದೇವೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಮತಗಳನ್ನು ವಿಭಜಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರಬಹುದು, ಆದರೆ ನಾವು ರಾಜಕೀಯಕ್ಕಾಗಿ ಇಲ್ಲಿ ಸ್ಪರ್ಧಿಸುತ್ತಿದ್ದೇವೆ ಎಂದು ಎಎಪಿಯ ಕರ್ನಾಟಕ ಸಂಚಾಲಕ ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕೂಡ ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರ ನಿಗಮಗಳ ಎಂಟು ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.  ನಾವು ಪಕ್ಷದ ಬದ್ಧ ಕಾರ್ಯಕರ್ತರಾಗಿದ್ದೇವೆ, ಕೊಳ್ಳೇಗಾಲ ಶಾಸಕ ಎನ್ ಮಹೇಶ್ ಪಕ್ಷ ತೊರೆದಿದ್ದರಿಂದ ಬಿಎಸ್ ಪಿ ಪಕ್ಷ ಶುದ್ಧವಾಗಿದೆ ಎಂದು ಬಿಎಸ್ ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ಹೇಳಿದ್ದಾರೆ.

ಬಿಎಸ್ಪಿಗೆ ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆಯು ಅಪ್ರಸ್ತುತ ಎಂದು ಅವರು ಸ್ಪಷ್ಟಪಡಿಸಿದರು.  ಬಿಎಸ್‌ಪಿ ಹಿಂದಿನ ಆಡಳಿತಗಳಲ್ಲಿ ಬಹುಜನರ (ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ) ಜೀವನವು ಹೇಗೆ ಸುಧಾರಿಸಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ. ಪಕ್ಷವು ರಾಜ್ಯದಾದ್ಯಂತ ತನ್ನ ಕಾರ್ಯಕರ್ತರಿಗಾಗಿ ಸರಣಿ ಕಾರ್ಯಾಗಾರಗಳನ್ನು ನಡೆಸುತ್ತಿದೆ. ಭಾಗವಹಿಸುವವರು ಪ್ರಯಾಣ ಮತ್ತು ವಾಸ್ತವ್ಯಕ್ಕಾಗಿ ತಮ್ಮ ಸ್ವಂತ ವೆಚ್ಚದಲ್ಲಿ ತಿರುಗುತ್ತಿದ್ದಾರೆ ಎಂದು ಹೇಳಿದರು.

2004 ರಲ್ಲಿ, ಪಕ್ಷದ ನಾಯಕಿ ಮಾಯಾವತಿಯ ವರ್ಚಸ್ಸು ಉತ್ತುಂಗದಲ್ಲಿದ್ದಾಗ, ಬಿಎಸ್ಪಿ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೇ. 2.5 ರಷ್ಟು ಮತಗಳನ್ನು ಗಳಿಸುವ ಮೂಲಕ, ಸುಮಾರು 45 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಮತಗಳ ಮೇಲೆ ಪ್ರಭಾವ ಬೀರಿತ್ತು, ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸುವಲ್ಲಿ ಯಶಸ್ವಿಯಾಯಿತು.

ಏತನ್ಮಧ್ಯೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ), ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಾಲೆ ಅವರು ತಮ್ಮ ಪಕ್ಷದ ಕಾರ್ಯಕರ್ತರನ್ನು ಎಂ ವೆಂಕಟಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಘಟಿಸುತ್ತಿದ್ದಾರೆ. 

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶವು ಬಿಬಿಎಂಪಿ ಚುನಾವಣೆ ಮತ್ತು ಮುಂದಿನ ವಿಧಾನಸಭೆ ಚುನಾವಣೆಗಳಿಗೆ ಮುನ್ನುಡಿಯಾಗಬಹುದು ಮತ್ತು ಸಣ್ಣ ಪಕ್ಷಗಳು ಯಾರ ಭವಿಷ್ಯಕ್ಕೆ ಮುಳುವಾಗುತ್ತವೆ ಎಂಬುದನ್ನು ಕಾದು ನೋಡಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT