ವೆಂಕಯ್ಯನಾಯ್ಡು 
ರಾಜಕೀಯ

ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆ ಅತ್ಯಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅಡ್ಡಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ನೀತಿ ಸಂಹಿತೆಯನ್ನು ರೂಪಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರು: ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅಡ್ಡಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ನೀತಿ ಸಂಹಿತೆಯನ್ನು ರೂಪಿಸುವಂತೆ ಸೂಚಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಅವರು, ಸದನದಲ್ಲಿ ಮತ್ತು ಸಾರ್ವಜನಿಕವಾಗಿ ನೀತಿ ಸಂಹಿತೆಯನ್ನು ಸದಸ್ಯರು ಅನುಸರಿಸಬೇಕು. ಪಕ್ಷಗಳು ನೀತಿ ಸಂಹಿತೆಯನ್ನು ರಚಿಸಿ ಅದನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು, ಇದರಿಂದ ರಾಜಕಾರಣಿಗಳು ತಾವು ನೀಡಿದ್ದ ಭರವಸೆಯನ್ನು ಈಡೇರಿಸುತ್ತಿದ್ದಾರೆಯೇ ಎಂಬ ಬಗ್ಗೆ ತಿಳಿಯಲು ಜನರಿಗೆ ಸಹಕಾರವಾಗುತ್ತದೆ ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬರೆದಿರುವ ಪತ್ರಿಕಾ ಲೇಖನವನ್ನು ಉಲ್ಲೇಖಿಸಿದ ಅವರು, ದುರದೃಷ್ಟವಶಾತ್, ಸಂಸತ್ತಿನಲ್ಲಿ ಸದಸ್ಯರ ಕಾರ್ಯಕ್ಷಮತೆ ಮತ್ತು ಅವರ ಮರು ನಾಮಕರಣ ಅಥವಾ ಮರು ಚುನಾವಣೆ ನಡುವೆ ಯಾವುದೇ ಸಂಬಂಧವಿಲ್ಲ. ಈ ಪರಿಸ್ಥಿತಿ ಬದಲಾಗಬೇಕಿದೆ. ಸಾರ್ವಜನಿಕ ಜೀವನದಲ್ಲಿ ನೈತಿಕತೆಯನ್ನು ಕಾಪಾಡಿಕೊಳ್ಳಬೇಕು. ಸದಸ್ಯರು ಮರು ಆಯ್ಕೆ ಬಯಸಿದಾಗ ಸಂಸತ್ತಿನಲ್ಲಿ ಮತ್ತು ಅವರ ಕ್ಷೇತ್ರಗಳಲ್ಲಿ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಬೇಕು ಎಂದು ವೆಂಕಯ್ಯನಾಯ್ಡು ಹೇಳಿದರು.

ಪಾತ್ರ, ದಕ್ಷತೆ, ಸಾಮರ್ಥ್ಯ ಮತ್ತು ನಡವಳಿಕೆ ಬಹಳ ಮುಖ್ಯ. ಆದರೆ, ನಾಲ್ಕು 'ಸಿ'ಗಳನ್ನು ಮತ್ತೊಂದು ನಾಲ್ಕು' ಸಿ'ಗಳ  ಸೆಟ್ ನಿಂದ ಬದಲಾಯಿಸಲಾಗಿದೆ: ಜಾತಿ, ಸಮುದಾಯ, ಹಣ ಮತ್ತು ಅಪರಾಧ" ಎಂದು ಅವರು ಬೇಸರ ವ್ಯಕ್ತಪಡಿಸಿದರು. ಶಿಸ್ತು ಕ್ರಮ ತೆಗೆದುಕೊಳ್ಳುವುದು ಒಂದೇ ಪರಿಹಾರವಲ್ಲ ಮತ್ತು ರಾಜಕೀಯ ಪಕ್ಷಗಳು ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳ ಕಾರ್ಯಕ್ಷಮತೆಯನ್ನು ಸುಧಾರಿಸುವ ಜವಾಬ್ದಾರಿಯನ್ನು ಹೊಂದಿವೆ.

ಪ್ರಜಾಪ್ರಭುತ್ವದಲ್ಲಿ, ಸಭ್ಯತೆ ಮತ್ತು ಶಿಸ್ತು ಕಾಪಾಡಿಕೊಳ್ಳಬೇಕು ಹಾಗೂ ಅಭಿವೃದ್ಧಿ-ಆಧಾರಿತವಾಗಿರಬೇಕು. ಸರ್ಕಾರವು ಪ್ರಸ್ತಾಪಿಸುತ್ತದೆ, ವಿರೋಧಕ್ಕಾಗಿ ವಿರೋಧ ಪಕ್ಷ ವಿರೋಧಿಸುತ್ತದೆ ಮತ್ತು ಸದನವು ವಿಸರ್ಜನೆ ಮಾಡಲಾಗುತ್ತದೆ. ನಾನು ರಾಜಕೀಯದ ಬಗ್ಗೆ ಮಾತನಾಡುತ್ತಿಲ್ಲ, ಆದರೆ ಸುವ್ಯವಸ್ಥೆ ಕಾಪಾಡುವ ಅಗತ್ಯವನ್ನು ಮಾತ್ರ ಒತ್ತಿ ಹೇಳುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT