ರಾಜಕೀಯ

ಮೊದಲ ಬಾರಿ ಸಚಿವರಾದವರಿಗೆ ಗೃಹ ಖಾತೆ ನೀಡಿದ್ದೇಕೆ?: ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ!

Shilpa D

ಬೆಂಗಳೂರು: ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ. 

ವಿಧಾನ ಪರಿಷತ್ ಮಾಜಿ ಸಭಾಪತಿ ವಿಆರ್ ಸುದರ್ಶನ್. ಕೆಪಿಸಿಸಿ ಕಾರ್ಯಾಧ್ಯಕ್ಷ  ಸಲೀಂ ಅಹ್ಮದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಹರಿಹಾಯ್ದಿದ್ದಾರೆ. ಮೈಸೂರು ಪೊಲೀಸ್ ಅಕಾಡೆಮಿಯಲ್ಲಿ ಪಿಸ್ತೂಲ್‌ನಿಂದ ನಿಗದಿತ ಸ್ಥಳದತ್ತ ಗುರಿಯಿಟ್ಟು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಫೈರಿಂಗ್ ಮಾಡಿದರು.

ಮೊದಲ ಬಾರಿ ಸಚಿವರಾದವರಿಗೆ ಗೃಹಖಾತೆ ಏಕೆ ನೀಡಬೇಕಿತ್ತು. ಗೃಹ ಸಚಿವರನ್ನು ಸಮರ್ಥರೆಂದು ಬಿಜೆಪಿ ಪರಿಗಣಿಸಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಕೆ ಅತ್ಯಾಚಾರ ಪ್ರಕರಣದ ಬಗ್ಗೆ ನಿಯಮಿತವಾಗಿ ಅಪ್‌ಡೇಟ್‌ಗಳನ್ನು ಪಡೆಯಬೇಕು? ಅವರು ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.

ಸಮಾಜದಲ್ಲಿ ಅತ್ಯಾಚಾರದಂತಹ ದುಷ್ಕೃತ್ಯಗಳು ನಡೆಯಲೇಬಾರದು. ಇಂತಹ ಹೀನ ಕೃತ್ಯದಲ್ಲಿ ಭಾಗಿಯಾಗುವವರಿಗೆ ಕಠಿಣ ಶಿಕ್ಷೆ ಆಗಲೇಬೇಕು. ಏನೆಲ್ಲಾ ಕತ್ತರಿಸಬೇಕೊ ಅದನ್ನೆಲ್ಲಾ ಕತ್ತರಿಸಿಬಿಡಬೇಕು’ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.

SCROLL FOR NEXT