ರಾಜಕೀಯ

ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ, ಸಮಯ ಬಂದಾಗ ಎಲವನ್ನೂ ಹೇಳುತ್ತೇನೆ: ಕುಮಾರಸ್ವಾಮಿ

Lingaraj Badiger

ಕಲಬುರಗಿ: ಜೆಡಿಎಸ್, ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದೆ ಎಂಬ ಆರೋಪವನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ನಿರಾಕರಿಸಿದ್ದಾರೆ.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ಸಾರ್ವಜನಿಕರ ಯೋಗಕ್ಷೇಮಕ್ಕಾಗಿ ಸರ್ಕಾರವನ್ನು ಬೆಂಬಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಾಸ್ತವವಾಗಿ, ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ಸರ್ಕಾರದ ಬಗ್ಗೆ ಮೃದುವಾಗಿ ಮಾತನಾಡಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಯಾವಾಗಲೂ ಆಡಳಿತ ಪಕ್ಷದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತದೆ, ಆದರೆ ಆ ಪಕ್ಷ ರಾಜ್ಯ ಮತ್ತು ದೇಶದಲ್ಲಿ ಆಡಳಿತದಲ್ಲಿದ್ದಾಗ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ವಾಗ್ದಾಳಿ ನಡೆಸಿದರು.

ಪ್ರಶ್ನೆಯೊಂದಕ್ಕೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಾನು ಈಗ ನಾನು ಮಾತನಾಡುವುದಿಲ್ಲ, ಆದರೆ ಸೂಕ್ತ ಸಮಯದಲ್ಲಿ ಆ ಬಗ್ಗೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಇದೇ ವೇಳೆ ಚಾಮುಂಡೇಶ್ವರಿ ಶಾಸಕ ಜಿ ಟಿ ದೇವೇಗೌಡರ ಅವರು ಪಕ್ಷ ತೊರೆಯುವ ಊಹಾಪೋಹಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಜೆಡಿ(ಎಸ್) ಬಿಟ್ಟು ಹೋಗದಂತೆ ಯಾರನ್ನೂ ತಡೆಯುವುದಿಲ್ಲ. ಜೆಡಿ(ಎಸ್)ನ ಬಾಗಿಲುಗಳು ತೆರೆದಿವೆ, ಪಕ್ಷವನ್ನು ತೊರೆಯಲು ಬಯಸುವ ಕಾರ್ಯಕರ್ತರು ಅಥವಾ ನಾಯಕರು ಅದನ್ನು ಹೋಗಬಹುದು ಮತ್ತು ಪಕ್ಷವನ್ನು ಸೇರಲು ಬಯಸುವ ನಾಯಕರಿಗೆ ಸ್ವಾಗತ ಎಂದು ಹೇಳಿದರು.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿ(ಎಸ್) ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಯಾವುದೇ ಆಸಕ್ತಿ ಇರದಿದ್ದಾಗ, ನಾವು ಏಕೆ ಅವರ ಬಾಗಿಲು ತಟ್ಟಬೇಕು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

SCROLL FOR NEXT