ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಬಿಎಸ್‌ವೈ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಮಾಜಿ ಸಿಎಂ ಹೆಚ್​​​​.ಡಿ.ಕುಮಾರಸ್ವಾಮಿ

ಬಿಎಸ್ ಯಡಿಯೂಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಭಾನುವಾರ ಹೇಳಿದ್ದಾರೆ.

ಮೈಸೂರು: ಬಿಎಸ್ ಯಡಿಯೂಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಭಾನುವಾರ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮೈತ್ರಿ ವಿಚಾರವಾಗಿ ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಎಸ್ ಯಡಿಯೂಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿ ಆಗಿದೆ. ಈವರೆಗೆ ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಕೂಡ ಅದು ಅವರ ವೈಯಕ್ತಿಕ ಹೇಳಿಕೆ ಎಂದಿದ್ದಾರೆ. ಆದರೆ, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲವೂ ಬೇಡ ಎಂದಿದ್ದಾರೆ. ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಈ ಮೂಲಕ ಬಿಜೆಪಿ ಜೊತೆ ಮೈತ್ರಿ ಸುಳಿವು ನೀಡಿದ್ದಾರೆ.

 ಈ ಎಲ್ಲಾ ಅಂಶ ಮುಂದಿಟ್ಟುಕೊಂಡು ನಾಳೆ ಬೆಂಬಲದ ತೀರ್ಮಾನ ಮಾಡುವೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಹೇಳುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

Gen Zಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರ

ಭಾರತದ ಅವಿತಿರುವ ತೈಲ ಸಂಪತ್ತು ಪತ್ತೆಗೆ ನೂತನ ಸಮುದ್ರ ಮಂಥನ! (ಜಾಗತಿಕ ಜಗಲಿ)