ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಜೆಡಿಎಸ್ ಗೆ ಸಮಾನ ವೈರಿಗಳು: ಮಾಜಿ ಸಿಎಂ ಎ‍ಚ್.ಡಿ. ಕುಮಾರಸ್ವಾಮಿ

ಡಿಸೆಂಬರ್ 10ರಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ಕ್ಷೇತ್ರಗಳಲ್ಲಿ ಪಕ್ಷ ಬಿಜೆಪಿಗೆ ಸಹಕಾರ ನೀಡುವಂತೆ ಬಿಜೆಪಿ ನಾಯಕ ಯಡಿಯೂರಪ್ಪ ಮುಕ್ತವಾಗಿ ಕೋರಿಕೊಂಡಿದ್ದರು.

ಮಂಡ್ಯ: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಜೆಡಿಎಸ್ ಪಕ್ಷಕ್ಕೆ ಸಮಾನ ವೈರಿಗಳು ಎಂದು ಹೇಳಿಕೆ ನೀಡಿದ್ದಾರೆ. 

ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು ಜೆಡಿಎಸ್ ಪಕ್ಷದ ಸಹಕಾರ ಕೋರಿದ್ದಾರೆಯೇ ವಿನಾ ಮೈತ್ರಿಯನ್ನಲ್ಲ ಎಂದು ಕುಮಾರಸ್ವಾಮಿ ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. 

ತಾವು ಎಲ್ಲಿಯೂ ಜೆಡಿಎಸ್ ಪಕ್ಷ  ಬೇರೊಂದು ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುತ್ತಿದೆ ಎನ್ನುವುದನ್ನು ಹೇಳಿಲ್ಲ. ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದ ಕ್ಷೇತ್ರಗಳಲ್ಲಿ ಪಕ್ಷ ಯಾವ ಕಾರ್ಯತಂತ್ರ ರೂಪಿಸಬೇಕು ಎನ್ನುವುದನ್ನು ಕುಮಾರಸ್ವಾಮಿ ನಿರ್ಧರಿಸುವುದಾಗಿ ದೇವೇಗೌಡರು ತಿಳಿಸಿದ್ದರು.

ಡಿಸೆಂಬರ್ 10ರಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ಕ್ಷೇತ್ರಗಳಲ್ಲಿ ಪಕ್ಷ ಬಿಜೆಪಿಗೆ ಸಹಕಾರ ನೀಡುವಂತೆ ಬಿಜೆಪಿ ನಾಯಕ ಯಡಿಯೂರಪ್ಪ ಮುಕ್ತವಾಗಿ ಕೋರಿಕೊಂಡಿದ್ದರು.

ಈ ಬಗ್ಗೆ ಕೇಳಲಾಗಿ ಯಡಿಯೂರಪ್ಪನವರು ಬಿಜೆಪಿ ಪಕ್ಷ ಯಾವುದೇ ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಸ್ಪರ್ಧಿಸುತ್ತಿರುವ ಕ್ಷೇತ್ರಗಳಲ್ಲಿ ಪಕ್ಷ ಹಗಲು ರಾತ್ರಿ ವಿಜಯಕ್ಕೆ ಶ್ರಮಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!

ChatGPT ತಂದ ಸಾವು: "ಏನಾಗಲ್ಲ, ಈ ಮಿಶ್ರಣ ಸೇವಿಸು" ಎಂದಿದ್ದ OpenAI; ಮಾತು ನಂಬಿದ 19 ವರ್ಷದ ಯುವಕ ಸಾವು; ತಾಯಿಯ ರೋಧನೆ!