ಪ್ರತಿಭಟನಾ ನಿರತ ರೈತರ ಭೇಟಿ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಬಿಜೆಪಿ ಹಿರಿಯ ಮುಖಂಡ ಜಗದೀಶ ಶೆಟ್ಟರ್. 
ರಾಜಕೀಯ

2023ರ ಚುನಾವಣೆವರೆಗೂ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟನೆ

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದಲ್ಲಿ ಯಾವುದೇ ನಾಯಕತ್ವ ಬದಲಾವಣೆಗಳಿಲ್ಲ ಎಂದು ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿ: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದಲ್ಲಿ ಯಾವುದೇ ನಾಯಕತ್ವ ಬದಲಾವಣೆಗಳಿಲ್ಲ ಎಂದು ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.

ನಗರದ ಖಾಸಗಿ ಹೊಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. 2023 ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಕಣಕ್ಕಿಳಿಯಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಯಾವುದೇ ರೀತಿಯ ಆಕ್ಷೇಪಾರ್ಹ ಮಾತುಗಳನ್ನು ಆಡದಂತೆ ಈಗಾಗಲೇ ಕೇಂದ್ರದ ನಾಯಕರು ಸೂಚನೆ ನೀಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಕೂಡ ನಾಯಕತ್ವ ಬದಲಾವಣೆ ಬಗ್ಗೆ ಏನನ್ನೂ ಹೇಳಿಲ್ಲ ಎಂದು ತಿಳಿಸಿದ್ದಾರೆ.

ಬಳಿಕ ಸರ್ಕಾರ ಸಾಧನೆ ಕುರಿತು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಗ್ರಾಮೀಣಾಭಿವೃದ್ಧಿಯ ಬಗ್ಗೆ ಚಿಂತನೆ ಮತ್ತು ಅದರ ಕುರಿತ ದೃಷ್ಟಿಕೋನವನ್ನು ಬದಲಾಯಿಸಿದೆ. ಗ್ರಾಮಗಳಿಗೆ ಹೆಚ್ಚಿನ ಅಧಿಕಾರವನ್ನು ನಿಯೋಜಿಸುವ ಮೂಲಕ ಮತ್ತು ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ಸ್ಥಳೀಯ ಸಂಸ್ಥೆಗಳು ಮತ್ತು ಅವರ ಪ್ರತಿನಿಧಿಗಳಿಗೆ ಅಧಿಕಾರ ನೀಡಿದೆ.

“ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮೀಸಲಿಟ್ಟ 73,000 ಕೋಟಿ ರೂಪಾಯಿಗಳ ಜೊತೆಗೆ, ಕೇಂದ್ರ ಸರ್ಕಾರವು ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ವಿವಿಧ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ 1.33 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಯುಪಿಎ ಅವಧಿಯಲ್ಲಿ ಎನ್‌ಆರ್‌ಇಜಿಎಸ್ ಆರಂಭಿಸಲಾಗಿದ್ದರೂ, ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳನ್ನು ನಿರ್ಮಿಸಲು ನಾವು ರಚನಾತ್ಮಕ ಬದಲಾವಣೆ ತಂದಿದ್ದೇವೆ ಎಂದು ಹೇಳಿದ್ದಾರೆ.

ಈ ಹಿಂದೆ ಗ್ರಾಮ ಪಂಚಾಯತಿಗಳಿಗೆ ಬಿಡುಗಡೆಯಾದ ಅನುದಾನದ ಬಹುಪಾಲು ಅನುದಾನವನ್ನು ಕುಡಿಯುವ ನೀರು ಸರಬರಾಜು ಮತ್ತು ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿಗಳಿಗೆ ವಿನಿಯೋಗಿಸಲಾಗುತ್ತಿದೆ. ಇದೀಗ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಹಣವೂ ಉಳಿದಿಲ್ಲ. ಆದರೆ, ಜಲ ಜೀವನ್‌ ಮಿಷನ್‌ ಹಾಗೂ ಜಲಧಾರೆ ಯೋಜನೆ ಜಾರಿಯಿಂದ ಗ್ರಾ.ಪಂ.ಗಳಿಗೆ ಇತರೆ ಸಿವಿಲ್‌ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಕಷ್ಟು ಅನುದಾನಗಳು ಉಳಿದಿವೆ.

ಧಾರವಾಡ ಜಿಲ್ಲೆಯಲ್ಲಿಯೇ ಮಲಪ್ರಭಾ ಜಲಾಶಯದಿಂದ ಎಲ್ಲ 396 ಗ್ರಾಮಗಳಿಗೆನೀರು ಸರಬರಾಜು ಮಾಡಲು ಮಾರ್ಗಗಳನ್ನು ಅಳವಡಿಸಲು ಮತ್ತು ನೀರಿನ ಟ್ಯಾಂಕ್‌ಗಳನ್ನು ನಿರ್ಮಿಸಲು ಜಲ ಜಲಧಾರೆ ಯೋಜನೆ ಅಡಿಯಲ್ಲಿ 1,032 ಕೋಟಿ ರೂ ಖರ್ಚು ಮಾಡಲಾಗಿದೆ. ಇದೀಗ ನೀರು ಸರಬರಾಜು ಮಾಡಲು ಮಾರ್ಗಗಳನ್ನು ಅಳವಡಿಸಲು ಮತ್ತು ನೀರಿನ ಟ್ಯಾಂಕ್‌ಗಳನ್ನು ನಿರ್ಮಿಸಲು ಜಲ ಜೀವನ್ ಮಿಷನ್ ಅಡಿಯಲ್ಲಿ 363 ಕೋಟಿ ರೂ.ಗಳನ್ನು ನೀಡಲಾಗುತ್ತದೆ. 97 ಲಕ್ಷ ಕುಟುಂಬಗಳ ಪೈಕಿ 42 ಲಕ್ಷ ಕುಟುಂಬಗಳು ಈಗಾಗಲೇ ಟ್ಯಾಪ್ಡ್ ನೀರಿನ ಸಂಪರ್ಕವನ್ನು ಪಡೆದಿವೆ, 15 ಹಣಕಾಸು ಯೋಜನೆಯಡಿ (2020-2021 ರಿಂದ 2025-26) ಮೋದಿ ಸರ್ಕಾರ ಒಟ್ಟು 3.57 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಇದರಲ್ಲಿ ಕ್ರಮವಾಗಿ ರೂ 2.36 ಲಕ್ಷ ಕೋಟಿ ಮತ್ತು ರೂ 1.21 ಲಕ್ಷ ಕೋಟಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!

ರಷ್ಯನ್ ತೈಲ: ಆರ್ಥಿಕ ಅವಶ್ಯಕತೆ ಮತ್ತು ಅಮೆರಿಕದ ಒತ್ತಡಗಳ ನಡುವೆ ಸಿಲುಕಿದ ಭಾರತ, ಚೀನಾ (ಜಾಗತಿಕ ಜಗಲಿ)

ನಾವು ಭಾರತೀಯರನ್ನು ನಂಬುತ್ತೇವೆ; ಟ್ರಂಪ್ ನಮಗೆ...: ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಾ ಕೊರಿನಾ ಮಚಾದೊ ಅಚ್ಚರಿ ಹೇಳಿಕೆ

ಗದರಿಸಿದ್ದಕ್ಕೆ ತಾಯಿಯನ್ನು ಕೊಡಲಿಯಿಂದ ಹೊಡೆದು ಕೊಂದ 16 ವರ್ಷದ ಬಾಲಕ!

Pratap Simha vs Pradeep Eshwar: 'ಲೇ ಮಗನೆ.. ನಮ್ಮಪ್ಪನ್ನಂತೂ ನಿಮ್ಮೂರಿಗೆ ಕಳಿಸಲ್ಲ': ಮಿತಿ ಮೀರಿದ ವಾಕ್ಸಮರ, Video

SCROLL FOR NEXT