ಡಿ.ಕೆ.ಶಿವಕುಮಾರ್ 
ರಾಜಕೀಯ

ಬೆಳಗಾವಿ ಅಧಿವೇಶನ: ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಗೆ ಡಿ.ಕೆ.ಶಿವಕುಮಾರ್ ವಿರೋಧ

ಕ್ರೈಸ್ತ ಸಮುದಾಯ ಶಿಕ್ಷಣ, ಆರೋಗ್ಯ ಮತ್ತಿತರ ಸಮಾಜ ಸೇವೆಗಳ ಮೂಲಕ ಗಮನ ಸೆಳೆದಿದೆ.‌ ಗೌರವದಿಂದ ಸೇವೆ ಮಾಡುತ್ತಾ ಬಂದಿದೆ. ಅವರ ಮನಸ್ಸಿಗೆ ನೋವುಂಟು ಮಾಡುವುದು ಸರಿಯಲ್ಲ- ಡಿಕೆಶಿ

ಬೆಂಗಳೂರು: ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಗೆ ಸರಕಾರ ಗಂಭೀರ ಚಿಂತನೆ ನಡೆಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಬೆಳಗಾವಿ ಅಧಿವೇಶನದಲ್ಲಿ  ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾಯಿದೆಗೆ ದುರುದ್ದೇಶಪೂರಿತ ಹೆಚ್ಚುವರಿ ತಿದ್ದುಪಡಿ ತರಲು ಕಾಂಗ್ರೆಸ್ ಪಕ್ಷದ ಸಂಪೂರ್ಣ ವಿರೋಧವಿದೆ.

ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ, ಸಮುದಾಯಗಳಿಗೂ ಸಮಾನ ಗೌರವವಿದೆ. ಧಾರವಾಡ, ಕೊಡಗು ಮತ್ತಿತರ ಕಡೆ ಈಗಾಗಲೇ ಏನೇನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ನಮ್ಮದು ಜಾತ್ಯತೀತ ದೇಶ, ರಾಜ್ಯ. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಚರ್ಚ್ ಮೇಲಿನ ದಾಳಿ, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ಸರಿಯಲ್ಲ. ಬಿಜೆಪಿ ಸರಕಾರ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದರು. ಇದರಿಂದ ರಾಜ್ಯದ ಗೌರವಕ್ಕೆ ಕುಂದು ಬರುವುದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆಗೂ ಭಂಗವಾಗಲಿದೆ ಎಂದರು.

ಕ್ರೈಸ್ತ ಸಮುದಾಯ ಶಿಕ್ಷಣ, ಆರೋಗ್ಯ ಮತ್ತಿತರ ಸಮಾಜ ಸೇವೆಗಳ ಮೂಲಕ ಗಮನ ಸೆಳೆದಿದೆ.‌ ಗೌರವದಿಂದ ಸೇವೆ ಮಾಡುತ್ತಾ ಬಂದಿದೆ. ಅವರ ಮನಸ್ಸಿಗೆ ನೋವುಂಟು ಮಾಡುವುದು ಸರಿಯಲ್ಲ ಎಂದು ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT