ಕಾಂಗ್ರೆಸ್ ಗೆ ಮರಳಿದ ಗ್ರಾಮ ಪಂಚಾಯತಿ ಸದಸ್ಯೆ 
ರಾಜಕೀಯ

ಶಿವಮೊಗ್ಗ: ಗ್ರಾ.ಪಂ ಸದಸ್ಯೆಯ ಆಪರೇಷನ್ ಆಟ; ಬೆಳಗ್ಗೆ ಬಿಜೆಪಿ, ಸಂಜೆ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಿ ಜೂಟಾಟ!

ವಿಧಾನ ಪರಿಷತ್ ಚುನಾವಣೆ ಕಣ ರಂಗೇರಿದ್ದು ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳು ನಾನಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಪರಿಷತ್ ಚುನಾವಣೆ ಹಿನ್ನೆಲೆ ಆಪರೇಷನ್ ಆಟ ಶುರುವಾಗಿದೆ.

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಕಣ ರಂಗೇರಿದ್ದು ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳು ನಾನಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಪರಿಷತ್ ಚುನಾವಣೆ ಹಿನ್ನೆಲೆ ಆಪರೇಷನ್ ಆಟ ಶುರುವಾಗಿದೆ.

ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಿದ್ದವರು ಸಂಜೆ ಮತ್ತೆ ಕಾಂಗ್ರೆಸ್ ಗೆ ವಾಪಾಸಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಒಂದೇ ದಿನದಲ್ಲಿ 2 ಬಾರಿ ಪಕ್ಷ ಬದಲಿಸಿದ್ದಾರೆ. ಬೆಳಿಗ್ಗೆ ಆಪರೇಶನ್ ಬಿಜೆಪಿ ಆದ್ರೆ ಸಂಜೆ  ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಿನ್ನೆ ಬೆಳಗ್ಗೆ ನಡೆದ ಬಿಜೆಪಿ ಎಂಎಲ್ಸಿ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸಾಗರ ಶಾಸಕ ಹರತಾಳು ಹಾಲಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯೆ ಪೂರ್ಣಿಮಾ ಬಿಜೆಪಿ ಸೇರಿದ್ದರು.

ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್‌ಗೆ ಸೇರಿದ್ದಾರೆ. ಮಾಜಿ ಶಾಸಕ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ವಾಪಸ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ನನಗೆ ರಾಜಕೀಯದ ತಿಳಿವಳಿಕೆ ಅಷ್ಟಾಗಿ ಇಲ್ಲ. ನನ್ನನ್ನು ಗ್ರಾ.ಪಂ. ಸದಸ್ಯರ ಕಾರ್ಯಕ್ರಮವಿದೆ ಎಂದು ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ನನಗೆ ಶಾಲು ಹಾಕಿಸಲಾಯಿತು. ಬಳಿಕವೇ ನನಗೆ ಈ ಬಗ್ಗೆ ಗೊತ್ತಾಗಿದ್ದು ಎಂದು ಪೂರ್ಣಿಮಾ ಅವರು ತಿಳಿಸಿದ್ದಾರೆ. ಅಲ್ಲದೇ ನಾನು ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿರುವುದರಿಂದ ನಾನು ಪುನಃ ಕಾಂಗ್ರೆಸ್​ಗೆ ಮರಳಿದ್ದೇನೆ ಎಂದು ಪೂರ್ಣಿಮಾ ತಿಳಿಸಿದ್ದಾರೆ.

ಪೂರ್ಣಿಮಾ ಅವರು ಅರಿವಿಲ್ಲದೆ ಬಿಜೆಪಿ ಸೇರಿದ್ದಾರೆ. ಹೀಗಾಗಿ ನಾನು ಕಾಂಗ್ರೆಸ್ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಅವರ ಬಳಿ ಮಾತನಾಡು ಪಕ್ಷಕ್ಕೆ ಮರಳಿ ಸ್ವಾಗತಿಸುವಂತೆ ವಿನಂತಿಸಿದೆ. ಅದೇ ಸಂಜೆ ಅವರನ್ನು ಕಾಂಗ್ರೆಸ್ ಗೆ ಸ್ವಾಗತಿಸಲಾಯಿತು ಎಂದು ಅರಸಾಳು ಜಿ.ಪಂ.ಅಧ್ಯಕ್ಷ ಉಮಾಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT