ಪುಟ್ಟರಂಗ ಶೆಟ್ಟಿ 
ರಾಜಕೀಯ

'ಬಾದಾಮಿ' ಬೇಡ ಇಲ್ಲಿ ಬನ್ನಿ, ನಿಮಗಾಗಿ ನಾನು ಸೀಟು ಬಿಡ್ತೀನಿ: 'ಸಿದ್ದು' ಗಾಗಿ ' ಕ್ಷೇತ್ರ ತ್ಯಾಗ'ಕ್ಕೆ ಮುಂದಾದ ಪುಟ್ಟರಂಗಶೆಟ್ಟಿ!

ಜಿ ಸಿಎಂ ಸಿದ್ದರಾಮಯ್ಯ ಅವರಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ  ಕ್ಷೇತ್ರ ಬಿಟ್ಟುಕೊುವುದಿಲ್ಲ ಎಂದು ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ  ಕ್ಷೇತ್ರ ಬಿಟ್ಟುಕೊುವುದಿಲ್ಲ ಎಂದು ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಬ್ಬ ಮಾಜಿ ಸಚಿವ ಪುಟ್ಟರಂಗ ಶೆಟ್ಟಿ, ಸಿದ್ದರಾಮಯ್ಯ ಬಯಸಿದರೇ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡುವುದಾಗಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಯಾವ ಜಿಲ್ಲೆಯಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಅವರು ನನ್ನ ಕ್ಷೇತ್ರಕ್ಕೆ ಬಂದರೂ ಬಿಟ್ಟುಕೊಡಲು ಸಿದ್ಧ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಚಾಮರಾಜನಗರದ ನಗರಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡ ನಾಯಕರೊಬ್ಬರು ನನ್ನ ಕ್ಷೇತ್ರಕ್ಕೆ ಬಂದರೆ ಅದು ಸೌಭಾಗ್ಯವೇ ಸರಿ. ಹೀಗಾಗಿ ಅವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ನಾನು ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದರು.

ಈ ಹಿಂದೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು 2023ರಲ್ಲಿ ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದು ಹಲವು ಬಾರಿ ಹೇಳಿದ್ದರು. ಆದರೆ ತಾವು ಬಾದಾಮಿಯಿಂದಲೇ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದರು.

ತಮ್ಮ ಪುತ್ರ ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಅವರಿಗೆ ತೊಂದರೆಯಾಗದಂತೆ ಮಾಡಲು ನಿರ್ಧರಿಸಿರುವ ಸಿದ್ದರಾಮಯ್ಯ, ದಲಿತ, ಕುರುಬ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಜನರಿರುವ ಪ್ರದೇಶಗಳಾದ ಕೋಲಾರ ಅಥವಾ ಮಾಲೂರು ಇಲ್ಲವೇ ಬೆಂಗಳೂರಿನ ಹೆಬ್ಬಾಳದಿಂದ ಸ್ಪರ್ಧಿಸಲು ಚಿಂತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.

ಹೆಬ್ಬಾಳದಿಂದ ಸ್ಪರ್ಧಿಸುವಂತೆ ಶಾಸಕ ಬೈರತಿ ಸುರೇಶ್ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹಲವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ, 2018ರಲ್ಲಿ ಜೆಡಿಎಸ್‌ನ ಜಿ.ಟಿ.ದೇವೇಗೌಡ ವಿರುದ್ಧ ಸಿದ್ದರಾಮಯ್ಯ ಸೋತಿದ್ದರು. ಆದರೆ ಇದೀಗ ದೇವೇಗೌಡರು ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ.

ಸಿದ್ದರಾಮಯ್ಯ ಚಾಮರಾಜನಗರದಿಂದ ಸ್ಪರ್ಧಿಸಿದರೇ ಬಿಜೆಪಿಗೆ  ಸಹಕಾರಿಯಾಗಲಿದೆ ಎಂದು ಕೆಲ ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ. 2018ರಲ್ಲಿ ಗುಂಡ್ಲುಪೇಟೆಯಲ್ಲಿ ಬಿಜೆಪಿ ಗೆದ್ದಿತ್ತು ಮತ್ತು  2019ರಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆ ಕ್ಷೇತ್ರವನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು.  

ಪುಟ್ಟರಂಗ ಶೆಟ್ಟಿ ಉಪ್ಪಾರ ಸಮುದಾಯದ ಕಾಂಗ್ರೆಸ್ ನ ಏಕೈಕ ಶಾಸಕರಾಗಿದ್ದಾರೆ,  ಹೆಚ್ಟಿನ ಸಂಖ್ಯೆಯಲ್ಲಿ ಮತದಾರರಿದ್ದರು ಬೇರೆ ಯಾವೊಬ್ಬ ನಾಯಕರು ಶಾಸಕನಾಗಿ ಜಯಗಳಿಸಲು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT