ಕುಮಾರಸ್ವಾಮಿ 
ರಾಜಕೀಯ

'ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ: ಜೆಡಿಎಸ್ ಸೋಲಿಗೆ ಕುಮಾರಸ್ವಾಮಿ ಬೇಸರ

'ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರಿಷತ್ ಚುನಾವಣೆಯಲ್ಲಿ ಪಕ್ಷದ...

ಬೆಂಗಳೂರು: 'ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರಿಷತ್ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದಿದ್ದಾರೆ.

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿರುವುದಾಗಿ ಮೇಲ್ಮನೆ ಚುನಾವಣಾ ಫಲಿತಾಂಶ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ ಎಂದಿರುವ ಕುಮಾರಸ್ವಾಮಿ, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು, ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT