ಕೆ.ಎಸ್ ಈಶ್ವರಪ್ಪ 
ರಾಜಕೀಯ

ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸಾವಿನ ತನಿಖೆಯಾಗಬೇಕು: ಸದನದಲ್ಲಿ ಸಚಿವರ ಒತ್ತಾಯ

ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ಬೆಳಗಾವಿ: ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ಅಪಘಾತದ ಬಗ್ಗೆ ತನಿಖೆ ಆಗಬೇಕು ಇಲ್ಲಂದ್ರೆ ಪ್ರಪಂಚದಲ್ಲಿ ಅಸಮಾಧಾನ ಹಾಗೆ ಉಳಿಯುತ್ತದೆ. ಕೆಲವರು ಸಿಡಿಎಸ್ ನಿಧನದ ಬಗ್ಗೆ ವಿಕೃತ ಹೇಳಿಕೆ ಟ್ವೀಟ್ ಮಾಡಿದ್ದಾರೆ. ಇದನ್ನು ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ ಮಾಡಿದ್ದಾರೆ ಎಂದರು.

ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು. ಈ ಬಗ್ಗೆ ಸಂಶಯ ಇದೆ. ರಷ್ಯನ್ ನಿರ್ಮಿಸಿದ ಹೆಲಿಕಾಪ್ಟರ್ ಅದು. ಅಪಘಾತದ ಕಾರಣ ಏನು ಎಂಬುವುದು ತಿಳಿಯಬೇಕು ಎಂದು ಸದನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು.

ಅಡ್ವಾನ್ಸ್ ಇಂಜಿನ್ ಹೆಲಿಕಾಪ್ಟರ್ ಅಪಘಾತದಿಂದ ಸತ್ತಿದ್ದಾರೆ ಎಂಬುವುದೇ ಆಶ್ಚರ್ಯ ಎಂದ ಅವರು, ನಾನು ಯಾರ ಕೈವಾಡ ಇದೆ ಎಂಬ ಶಂಕೆ ಪಡಲ್ಲ ಆದರೆ ಹೇಗೆ ಸತ್ತರು, ಅಪಘಾತ ಹೇಗಾಯಿತು ಎಂಬುವುದು ನಿಗೂಢವಾಗಿದೆ. ಈ ಬಗ್ಗೆ ಜನರಿಗೆ ಗೊತ್ತಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಆಸ್ಪತ್ರೆಗೆ ಭೇಟಿ ನೀಡಿ ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಆರೋಗ್ಯ ವಿಚಾರಿಸಿದ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಅಂತಿಮ ಹಂತದಲ್ಲಿ 21 ಚಿನ್ನದ ಪದಕಗಳು: 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟು 85 ಪದಕ!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!