ಯೂಸೂಫ್ ಱ 
ರಾಜಕೀಯ

ಸಾವಿರ 'ಕೋಟಿ'ಗಳಿದ್ದರೂ ಅದೃಷ್ಟ ಖೋತಾ: ಪರಿಷತ್ ಚುನಾವಣೆಯಲ್ಲಿ 'ಕೆಜಿಎಫ್ ಬಾಬು' ಗೆ ಹೀನಾಯ ಸೋಲು!

 ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸೂಫ್‌ ಶರೀಫ್‌ ಸೋಲನುಭವಿಸಿದ್ದಾರೆ.

ಬೆಂಗಳೂರು:  ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸೂಫ್‌ ಶರೀಫ್‌ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಸೋಲು ಕಂಡಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಎಚ್‌.ಎಸ್‌.ಗೋಪಿನಾಥ್, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯೂಸಫ್‌ ಷರೀಫ್‌ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು. ಆದರೆ, ಗೋಪಿನಾಥ್‌ ಮತ್ತು ಯೂಸೂಫ್‌ ಶರೀಫ್‌ ನಡುವೆ ನೇರ ಹಣಾಹಣಿ ಇತ್ತು. ಗೋಪಿನಾಥ್‌ ಈ ಹಿಂದೆ ಕೂಡ ಚುನಾವಣಾ ಕಣಕ್ಕಿಳಿದಿದ್ದು, ಕೆಲವೇ ಮತಗಳ ಅಂತರಲ್ಲಿ ಸೋಲನ್ನು ಅನುಭವಿಸಿದ್ದರು. ಬಿಇ ಪದವೀಧರ ಆಗಿರುವ ಗೋಪಿನಾಥ್‌ ಅವರು ಬಿಜೆಪಿಯಲ್ಲಿ ಹಲವು ಹುದ್ದೆ ನಿರ್ವಹಿಸಿದ್ದರು. ಪಕ್ಷವೇ ಆಡಳಿತದಲ್ಲಿರುವ ಕಾರಣ ಸರ್ಕಾರದ ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಕೇಳಿ ಜಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್‌ನ ಯೂಸೂಫ್‌ ಶರೀಫ್‌ ಅಲಿಯಾಸ್ ಕೆಜಿಎಫ್ ಬಾಬು ರಾಜಕೀಯದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಆದ್ರೆ ಪರಿಷತ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎಂಟಿಬಿ ನಾಗರಾಜ್ ಅವರನ್ನೂ ಮೀರಿಸಿ 1743 ಕೋಟಿ ರು. ಆಸ್ತಿಯ ಒಡೆಯನಾಗಿರುವುದು ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿತ್ತು.

ಸಾವಿರಾರು ಕೋಟಿಯ ಒಡೆಯರಾಗಿರುವ ಕೆಜಿಎಫ್ ಬಾಬು ನಾಮಪತ್ರ ಸಲ್ಲಿಸಲು ಬರುವಾಗ ಐಷಾರಾಮಿ ಕಾರಿನಲ್ಲಿ ಆಗಮಿಸಿದ್ದರು. ಇಂದು ಫಲಿತಾಂಶ ಹೊರ ಬೀಳುತ್ತಿದ್ದಂತೆ ಯಾವುದೇ ಪ್ರತಿಕ್ರಿಯೆ ನೀಡದೇ ಆಟೋ ಹತ್ತಿ ತೆರಳುವ ಮೂಲಕ ಅಚ್ಚರಿ ಮೂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT