ರಾಜಕೀಯ

ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ: ಹೆಚ್ ಡಿ ಕುಮಾರಸ್ವಾಮಿ

Manjula VN

ಬೆಂಗಳೂರು: ಮಹಾರಾಷ್ಟ್ರದ ‌ಕೊಲ್ಹಾಪುರ ದಲ್ಲಿ ಶಿವಸೇನಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕನ್ನಡ ಬಾವುಟವನ್ನು ಮಂಗಳವಾರ ಸುಟ್ಟು ಹಾಕಿದ್ದು, ಇದಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ಟಿಟರ್ ನಲ್ಲಿ ಟ್ವೀಟ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ ಎಂದು ಹೇಳಿದ್ದಾರೆ.

ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು.ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಹಾಗೂ ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

SCROLL FOR NEXT