ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮೇಧಾವಿ ಪಂಡಿತರೊಬ್ಬರು ಹೆಣ್ಣು ಮಕ್ಕಳಿಗೆ ಸಲಹೆ ಕೊಟ್ಟಿದ್ದನ್ನು ನೋಡಲು ಸದನಕ್ಕೆ ಹೋಗಬೇಕಾ? ಟಿಎ, ಡಿಎಗಾಗಿ ಹೋಗಲಾ?

ಸದನಕ್ಕೆ ಗೈರಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಟಿಎ, ಡಿಎ ಪಡೆಯುವುದಕ್ಕೆ ನಾನು ಸದನಕ್ಕೆ ಹೋಗಲಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ಸದನಕ್ಕೆ ಗೈರಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಟಿಎ, ಡಿಎ ಪಡೆಯುವುದಕ್ಕೆ ನಾನು ಸದನಕ್ಕೆ ಹೋಗಲಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, 5 ದಿನದ ಅಧಿವೇಶನದಲ್ಲಿ ಏನು ಚರ್ಚೆಯಾಗಿದೆ. ಒಂದು ದಿನ ಭೈರತಿ ಬಸವರಾಜ್ ವಿರುದ್ಧ ಪ್ರತಿಭಟನೆ ಮಾಡಿದರು. ಇನ್ನೊಂದು ದಿನ ತಹಶೀಲ್ದಾರರ ವಿರುದ್ಧ ಪ್ರತಿಭಟನೆ ಮಾಡಿದರು. ಅದನ್ನೆಲ್ಲಾ ನೋಡುವುದಕ್ಕೆ ನಾನು ಅಲ್ಲಿಗೆ ಹೋಗಬೇಕಿತ್ತಾ?

ಇನ್ನು ಮೇಧಾವಿ ಪಂಡಿತರೊಬ್ಬರು (ರಮೇಶ್ ಕುಮಾರ್) ಸದನದಲ್ಲಿ ಹೆಣ್ಣು ಮಕ್ಕಳಿಗೆ ಸಲಹೆ ಕೊಟ್ಟಿದ್ದನ್ನು ನೋಡಲು ಸದನಕ್ಕೆ ಹೋಗಬೇಕಾ?  ಎಂದು ಪ್ರಶ್ನಿಸಿದ್ದಾರೆ.

ಸೆಷನ್​ಗೆ ಹೋಗಿ ನಾನು ಏನು ಮಾಡಲಿ? ಟಿಎ-ಡಿಎ ಕ್ಲೈಮ್ ಮಾಡೋಕೆ ಹೋಗಬೇಕು ಅಷ್ಟೇ. ಸದನದಲ್ಲಿ ರಾಜ್ಯದ ಸಮಸ್ಯೆ ಬಗ್ಗೆ ಎಷ್ಟು ಚರ್ಚೆ ಆಯ್ತು? ಇದರಿಂದ ಏನು ಸಾಧನೆ ಆಯ್ತು. ಸಮಯ ಸಿಕ್ಕರೆ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತೀನಿ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel