ಸಾಂದರ್ಭಿಕ ಚಿತ್ರ 
ರಾಜಕೀಯ

2023 ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಗಳ ಪಟ್ಟಿ ರಿಲೀಸ್

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 2023 ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 2023 ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದೆ.

ಕೆ ಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಸಂಭಾವ್ಯ ಅಭ್ಯರ್ಥಿಗಳನ್ನು ಘೋಷಿಸಿ, ಅವರನ್ನು ಅಭಿನಂದಿಸಿದರು. ವಿವಿಧ ಕ್ಷೇತ್ರಗಳಿಗೆ 50 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು (ಕೆಆರ್‌ಎಸ್‌) ಸೋಮವಾರ ಬಿಡುಗಡೆ ಮಾಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿ, ಜಿಲ್ಲಾ ಪ್ರವಾಸ ಕೈಗೊಂಡಿದೆ.

ಪ್ರೆಸ್‌ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, ''ಪಕ್ಷದ ಕಚೇರಿಯಲ್ಲಿ ಡಿಸೆಂಬರ್ 12ರವರೆಗೆ ಆಕಾಂಕ್ಷಿಗಳ ಸಂದರ್ಶನ ನಡೆಸಿದ್ದೇವೆ. 123 ಮಂದಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ 70 ಮಂದಿ ಸಂದರ್ಶನಕ್ಕೆ ಹಾಜರಾಗಿದ್ದರು. ಮೊದಲ ಹಂತದಲ್ಲಿ 50 ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ,'' ಎಂದರು.

ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್ ಪಕ್ಷಗಳು ಜಾತಿ ಓಲೈಕೆ ಹಾಗೂ ಕುಟುಂಬ ರಾಜಕಾರಣಕ್ಕೆ ಜೋತು ಬಿದ್ದಿವೆ. ಇದಕ್ಕೆ ಪ್ರತಿಯಾಗಿ ಪ್ರಾಮಾಣಿಕ, ಜನಪರ ರಾಜಕಾರಣದಲ್ಲಿ ಸಕ್ರಿಯರಾಗುವ ಹಾಗೂ ಹಣ, ಮದ್ಯದಂತಹ ಆಮಿಷ ಒಡ್ಡದೆಯೇ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅಭ್ಯರ್ಥಿಗಳನ್ನು ಸಜ್ಜುಗೊಳಿಸುತ್ತೇವೆ. ಇದೇ ಕಾರಣಕ್ಕೆ ಸಾಕಷ್ಟು ಮುಂಚಿತವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ,'' ಎಂದು ಹೇಳಿದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಜಯನಗರದಿಂದ ಸ್ಪರ್ಧಿಸಿದ್ದ ರೆಡ್ಡಿ ಈ ಬಾರಿ ರಘುಪತಿ ಭಟ್ ಅವರಿಗೆ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಇತ್ತೀಚೆಗೆ ನಡೆದ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿಯೂ ಸಹ ಕೆಆರ್‌ಎಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಕೆಆರ್ ಎಸ್  ಕ್ರಮವಾಗಿ 500 ಮತ್ತು 900 ಮತಗಳನ್ನು ಗಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್