ಅರುಣ್ ಸಿಂಗ್ 
ರಾಜಕೀಯ

ಡಿ. 28ರಂದು ಬಿಜೆಪಿ ಕೋರ್ ಕಮಿಟಿ ಸಭೆ: ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ; ಚುನಾವಣೆ ಫಲಿತಾಂಶದ ಕೂಲಂಕುಷ ಚರ್ಚೆ

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಳೆದ ಕೆಲವು ದಿನಗಳಿಂದ ಸರ್ಕಾರ ಮತ್ತು ಸಂಘಟನೆಗಳಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಕೂಲಂಕುಷ ವಾಗಿ  ಚರ್ಚೆ ಮಾಡಲಾಗುವುದು.

ಬೆಂಗಳೂರು: ಡಿಸೆಂಬರ್ 28-29 ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಳೆದ ಕೆಲವು ದಿನಗಳಿಂದ ಸರ್ಕಾರ ಮತ್ತು ಸಂಘಟನೆಗಳಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಕೂಲಂಕುಷ ವಾಗಿ  ಚರ್ಚೆ ಮಾಡಲಾಗುವುದು.

ಕಳೆದ ಮೂರು ತಿಂಗಳ ಬೆಳವಣಿಗೆಗಳು, ಇತ್ತೀಚಿನ ಎಂಎಲ್ ಸಿ ಚುನಾವಣೆ ಫಲಿತಾಂಶ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಮಂಡ್ಯ, ಬೆಳಗಾವಿ ಮತ್ತು ಹಾಸನದಲ್ಲಿ ಪಕ್ಷದ ಸೋಲು ಮತ್ತು ಧಾರವಾಡದಲ್ಲಿ ಅಲ್ಪ ಮತಗಳ ಅಂತರದ ಗೆಲುವಿನ ವರದಿ ಈಗಾಗಲೇ ಪಕ್ಷದ ಹೈಕಮಾಂಡ್‌ಗೆ ತಲುಪಿದೆ.

ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಸೆಳೆಯುವಲ್ಲಿ ಸಚಿವ ನಾರಾಯಣಗೌಡ ವಿಫಲರಾಗಿದ್ದು, ಜೆಡಿಎಸ್‌ನಿಂದ ಕಾಂಗ್ರೆಸ್‌ ಸ್ಥಾನ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಕರ್ನಾಟಕದಲ್ಲಿ ಎರಡನೇ ಪ್ರಾಶಸ್ತ್ಯದ ಮತಗಳು ಕಾಂಗ್ರೆಸ್ ಗೆ ದೊರೆತಿರುವ ಬಗ್ಗೆ ಬಿಜೆಪಿಗೆ ಆತಂಕ ಎದುರಾಗಿದೆ. ಇದೇ ವೇಳೆ, ಹಾವೇರಿ ಜಿಲ್ಲೆಯ ಮತದಾರರನ್ನು ಒಳಗೊಂಡ ಧಾರವಾಡ ದ್ವಿಸದಸ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರ ಕಿರಿಯ ಸಹೋದರ ಪ್ರದೀಪ ಶೆಟ್ಟರ್‌ ಗೆದ್ದು ಎರಡನೇ ಸ್ಥಾನದಲ್ಲಿದ್ದಾರೆ.

1,200 ಮತಗಳನ್ನು ಗಳಿಸಿದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ್ ಹಾವೇರಿ ಅವರನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವೊಲಿಸುವಲ್ಲಿ ನಾಯಕತ್ವ ವಿಫಲವಾಗಿರುವ ಬಗ್ಗೆ ಪ್ರದೀಪ್ ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೂ ಕಾರ್ಯಕ್ಷಮತೆ ಕಡಿಮೆ ಇರುವ ಸಚಿವರನ್ನು ಕೈ ಬಿಡುವುದರ ಜೊತೆಗೆ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕೂಡ ರಾಜ್ಯದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಕೇಂದ್ರ ನಾಯಕತ್ವಕ್ಕೆ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT