ಜೆ.ಪಿ ನಡ್ಡಾ 
ರಾಜಕೀಯ

ನಾಯಕತ್ವ ಬದಲಾವಣೆ ಗುಸುಗುಸು: ಬಿರುಕು- ಭಿನ್ನಮತಕ್ಕೆ ಬ್ರೇಕ್ ಹಾಕಲು ನಡ್ಡಾ ಎಂಟ್ರಿ; ಪಕ್ಷ ತೊರೆಯುುವವರಿಗೆ ತಕ್ಕ ಶಾಸ್ತಿ!

ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ಬೆಂಗಳೂರು: ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ಕಾರ್ಯಕಾರಿಣಿಯಲ್ಲಿ ಭಾಗವಹಿಸುವ  ಮೂಲಕ ರಾಜ್ಯದಲ್ಲಿ ಸದ್ಯ ಚರ್ಚೆಯಾಗುತ್ತಿರುವ ನಾಯಕತ್ವ ಬದಲಾವಣೆ ವಿಷಯಕ್ಕೆ ಸಬಂಧಿಸಿದಂತೆ ಸ್ಪಷ್ಟ ಸಂದೇಶ ನೀಡಲಿದ್ದಾರೆ.

ಡಿಸೆಂಬರ್ 28 ಮತ್ತು 29 ರಂದು ನಡೆಯುವ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್  ಮಾತ್ರ ಭಾಗವಹಿಸುವುದಾಗಿ ತಿಳಿದು ಬಂದಿತ್ತು.  ಆದರೆ ನಾಯಕತ್ವ ಬದಲಾವಣೆ ಗುಸುಗುಸು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ನಡ್ಡಾ ಅಖಾಡಕ್ಕಿಳಿಯುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷದ ರಾಜ್ಯ ನಾಯಕತ್ವದ ಕೂಲಂಕುಷ ಪರೀಕ್ಷೆ ನಿರೀಕ್ಷಿಸಲಾಗಿದ್ದರೂ, ಬೇರೆ ರೀತಿಯ ಊಹಾಪೋಹಗಳಿಗೆ ತೆರೆ ಎಳೆಯಬೇಕಾಗಿದೆ. ಪಕ್ಷದ ಕೇಂದ್ರ ನಾಯಕತ್ವವು ಆಡಳಿತ ವಿರೋಧಿ ಮತ್ತು ಆಂತರಿಕ ಕಚ್ಚಾಟದ ವಿರುದ್ಧ ಹೋರಾಡಬೇಕಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 8 ಮತ್ತು 9 ರಂದು ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ್ತೊಂದು ಸುತ್ತಿನ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದೆ.

ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿರುವ ಹಿರಿಯ ನಾಯಕರಾದ ವಿಶೇಷವಾಗಿ ಕೆ ಎಸ್ ಈಶ್ವರಪ್ಪ ಮತ್ತು ಮುರುಗೇಶ್ ನಿರಾಣಿ ಗೆ ಎಚ್ಚರಿಕೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಎಂಎಲ್‌ಸಿ ಚುನಾವಣೆ ವೇಳೆ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡ ನಾಯಕರ ವಿರುದ್ಧ ಹಂತಹಂತವಾಗಿ ಕ್ರಮಕೈಗೊಳ್ಳಲಾಗುವುದು.

ಅಲ್ಲದೆ, ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆಯಲು ಮುಂದಾಗಿರುವವರನ್ನು ವಜಾಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.  ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಕಿರಿಯ ಸಹೋದರ ಲಖನ್ ಸ್ಪರ್ಧಿಸಿ ಗೆದ್ದ ನಂತರ ಬೆಳಗಾವಿಯ ಉಭಯ ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಅನುಭವಿಸಿದ ಸೋಲನ್ನು ಹೈಕಮಾಂಡ್ ಗಮನಿಸಿದೆ ಎಂದು ಮೂಲಗಳು ತಿಳಿಸಿವೆ.

ಹುಬ್ಬಳ್ಳಿಯಲ್ಲ ಕಾರ್ಯಕಾರಣಿಯಲ್ಲಿ ಎರಡು ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆಯಿದೆ . ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಿದ ಬೊಮ್ಮಾಯಿ ಅವರನ್ನು ಶ್ಲಾಘಿಸುವುದು  ಹಾಗೂ ಎರಡನೆಯದು ಬೆಳಗಾವಿ ಚಳಿಗಾಲದ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಿರುವುದಕ್ಕೆ ಬೊಮ್ಮಾಯಿ ಅವರಿಗೆ ಅಭಿನಂದಿಸುವುದು. ಹೈದರಾಬಾದ್‌ನಲ್ಲಿರುವ ಅಮಿತ್ ಶಾ ಕೂಡ ಹುಬ್ಬಳ್ಳಿ ಸಭೆ ವೇಳೆ  ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT