ಅರುಣ್ ಸಿಂಗ್ 
ರಾಜಕೀಯ

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಅಸೆಂಬ್ಲಿ ಚುನಾವಣೆ: ಅರುಣ್ ಸಿಂಗ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ನೇತೃತ್ವದಲ್ಲಿಯೇ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ನೇತೃತ್ವದಲ್ಲಿಯೇ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಪಕ್ಷ ಮತ್ತು ರಾಜ್ಯ ಸರ್ಕಾರ ರಾಜ್ಯದ ಜನತೆಯ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿವೆ. ಮಂಗಳವಾರ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ನಾಡಿದ್ದು ಪಕ್ಷದ ಕಾರ್ಯಕಾರಿಣಿ ಸಭೆಗಳು ನಡೆಯಲಿವೆ ಎಂದು ತಿಳಿಸಿದರು.

ಈ ಸಭೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾಗವಹಿಸಬೇಕಿತ್ತು.  ಪಕ್ಷದ ಮುಖಂಡರನ್ನು ಉದ್ದೇಶಿಸಿ ಭಾಷಣ ಮಾಡಬೇಕಿತ್ತು. ಆದರೆ, ಕೋವಿಡ್ ನಿಯಮಾವಳಿ ಕಾರಣದಿಂದ ಅವರ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಪಕ್ಷದ ಕಾರ್ಯಕಾರಿಣಿ ಎಂದಿನಂತೆ ನಡೆಯಲಿದೆ. ಹಲವು ನಿರ್ಣಯಗಳನ್ನು ಅಂಗೀಕರಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಸರ್ಕಾರದ ನಿಯಮಾವಳಿಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಪ್ರಧಾನ ಮಂತ್ರಿಯವರು 15 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವುದಾಗಿ ಪ್ರಕಟಿಸಿರುವುದು ಶ್ಲಾಘನಾರ್ಹ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ