ಕಾರ್ಯಕಾರಿಣಿ ಸಭೆಗೆ ಸಜ್ಜಾಗಿರುವ ಹುಬ್ಬಳ್ಳಿ. 
ರಾಜಕೀಯ

ಹುಬ್ಬಳ್ಳಿಯಲ್ಲಿಂದು ಬಿಜೆಪಿ ಕಾರ್ಯಕಾರಿಣಿ ಸಭೆ: ಜೆಪಿ. ನಡ್ಡಾ ಗೈರು

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬರೋಬ್ಬರಿ 11 ವರ್ಷದ ಬಳಿಕ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಜ್ಜಾಗಿ ನಿಂತಿದೆ. ಮಂಗಳವಾರದಿಂದ 2 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕಾರಿಣಿಗೆ ಹುಬ್ಬಳ್ಳಿ ರಸ್ತೆಗಳು ಸಿಂಗಾರಗೊಂಡಿದೆ. ಇಡೀ ಹುಬ್ಬಳ್ಳಿ ನಗರದಲ್ಲಿ ಕೇಸರಿ ರಾರಾಜಿಸುತ್ತಿದೆ.

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬರೋಬ್ಬರಿ 11 ವರ್ಷದ ಬಳಿಕ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಜ್ಜಾಗಿ ನಿಂತಿದೆ. ಮಂಗಳವಾರದಿಂದ 2 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕಾರಿಣಿಗೆ ಹುಬ್ಬಳ್ಳಿ ರಸ್ತೆಗಳು ಸಿಂಗಾರಗೊಂಡಿದೆ. ಇಡೀ ಹುಬ್ಬಳ್ಳಿ ನಗರದಲ್ಲಿ ಕೇಸರಿ ರಾರಾಜಿಸುತ್ತಿದೆ.

ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರೀಯ ನಾಯಕರು ಹಾಗೂ ಕೇಂದ್ರ ಸಚಿವರು ಪಾಲ್ಗೊಳ್ಳುತ್ತಿದ್ದು, ಈ ಸಭೆ  ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದಕ್ಕೆ ಜನತೆ ಕೂಡ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ನೂತನ ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಳ್ಳುತ್ತಿಲ್ಲ. ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಡಿಸೆಂಬರ್ 28 ಹಾಗೂ 29 ರಂದು ಎರಡು ದಿನ ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‌ನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಿಗದಿಯಾಗಿದ್ದು, ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು, ಕೇಂದ್ರ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದ್ದರಿಂದ, ವಿಮಾನ ನಿಲ್ದಾಣದಿಂದ ಹೋಟೆಲ್‌ಗೆ ಹೋಗುವ ರಸ್ತೆಗಳನ್ನು ಭಾರೀ ಭದ್ರತೆ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ ನಡ್ಡಾ ಭೇಟಿಯನ್ನು ರದ್ದುಗೊಳಿಸಲಾಗಿದೆ.

ನಡ್ಡಾ ಅವರನ್ನು ಸ್ವಾಗತಿಸಲು 50 ಕಿಮೀವರೆಗೂ ರ್ಯಾಲಿಯನ್ನು ಆಯೋಜಿಸಲಾಗಿತ್ತು. ರ್ಯಾಲಿಯಲ್ಲಿ 25,000-30,000 ಜನರನ್ನು ನಿರೀಕ್ಷಿಸಲಾಗಿತ್ತು. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು 300 ಕ್ಕಿಂತ ಹೆಚ್ಚು ಜನರು ಸೇರ್ಪಡೆಗೊಳ್ಳುವಂತಿಲ್ಲ ಎಂಬ ನಿಯಮವನ್ನು ವಿಧಿಸಿರುವ ಹಿನ್ನೆಲೆಯಲ್ಲಿ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ. ನಡ್ಡಾ ಅವರ ಭೇಟಿಯನ್ನು ಮುಂದೂಡಲಾಗಿದೆ. ಆದರೆ ಸಭೆಯು ಯೋಜನೆಯ ಪ್ರಕಾರವೇ ನಡೆಯಲಿದೆ. ಇತರೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಅರುಣ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ! Video

ಕಲಬುರಗಿ: ನಡುರಸ್ತೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ; ಶವದ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಪತಿಯ ಬಂಧನ

SCROLL FOR NEXT