ರಾಜಕೀಯ

ಸ್ವಕ್ಷೇತ್ರ ಹಾವೇರಿಯಲ್ಲೇ ಸಿಎಂ ಬೊಮ್ಮಾಯಿಗೆ ಹಿನ್ನಡೆ; ಕಾಂಗ್ರೆಸ್ ಕಮಾಲ್, ಬಂಕಾಪುರ, ಗುತ್ತಲ ಪಟ್ಟಣ ಪಂಚಾಯಿತಿ ಕೈ ತೆಕ್ಕೆಗೆ

Srinivasamurthy VN

ಹಾವೇರಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಹಾವೇರಿಯಲ್ಲೇ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 

ಬಂಕಾಪುರ ಪುರಸಭೆಯಲ್ಲಿ ಒಟ್ಟು23  ಸ್ಥಾನಗಳಿದ್ದು, ಈ ಪೈಕಿ ಕಾಂಗ್ರೆಸ್ -14, ಬಿಜೆಪಿ -7, ಪಕ್ಷೇತರ -2 ಸ್ಥಾನ ಪಡೆದಿದೆ. ಹಾಗೂ ಗುತ್ತಲ ಪಟ್ಟಣ ಪಂಚಾಯಿತಿಯ ಒಟ್ಟು 18 ಸ್ಥಾನಗಳ ಪೈಕಿ ಕಾಂಗ್ರೆಸ್ ‌-11, ಬಿಜೆಪಿ -6, ಪಕ್ಷೇತರ -1 ಸ್ಥಾನ ಲಭಿಸಿದೆ.

ಎಂಎಲ್ಸಿ ಚುನಾವಣೆ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಇದು ಅಗ್ನಿಪರೀಕ್ಷೆಯಾಗಿತ್ತು. ನಗರ ಸಂಸ್ಥೆಗಳಾದ್ದರಿಂದ ಬಿಜೆಪಿಯ ಶಕ್ತಿ ಪರೀಕ್ಷೆಯೂ ಆಗಿದೆ.

5 ನಗರಸಭೆ, 19 ಪುರಸಭೆ ಮತ್ತು 34 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 58 ನಗರ ಸಂಸ್ಥೆಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ. 75ರಷ್ಟು ಮತದಾನವಾಗಿತ್ತು. ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿ ಶೇ. 70ಕ್ಕಿಂತ ಹೆಚ್ಚು ಮತದಾನವಾಗಿದ್ದು ವರದಿಯಾಗಿದೆ.
 

SCROLL FOR NEXT