ರಾಜಕೀಯ

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಬಿಡದಿ ಪುರಸಭೆ ಮತ್ತೆ ಜೆಡಿಎಸ್ ತೆಕ್ಕೆಗೆ, ಠೇವಣಿ ಕಳೆದುಕೊಂಡ ಬಿಜೆಪಿ

Srinivasamurthy VN

ರಾಮನಗರ: ಹಾಲಿ ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕಣಗಳಲ್ಲಿ ಒಂದಾಗಿದ್ದ ರಾಮನಗರದ ಬಿಡದಿ ಪುರಸಭೆಯಲ್ಲಿ ಜೆಡಿಎಸ್ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಬಿಡದಿ ಪುರಸಭೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಬಿಡದಿ ಪುರಸಭೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಒಟ್ಟು 23 ವಾರ್ಡುಗಳ ಪೈಕಿ ಜೆಡಿಎಸ್ 14 ವಾರ್ಡುಗಳಲ್ಲಿ, ಕಾಂಗ್ರೆಸ್ 9 ವಾರ್ಡುಗಳಲ್ಲಿ ವಿಜಯ ಸಾಧಿಸಿದೆ. ಅಧಿಕಾರ ಹಿಡಿಯಲು 14 ಮ್ಯಾಜಿಕ್ ಸಂಖ್ಯೆಯಾಗಿತ್ತು. ಜೆಡಿಎಸ್ ಗೆ ಇಷ್ಟು ಸಂಖ್ಯೆಯ ಸದಸ್ಯ ಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದು ಅಧಿಕಾರ ಹಿಡಿಯಲಿದೆ.

ಎಲ್ಲಾ ವಾರ್ಡುಗಳಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ
ಬಿಡದಿ ಪುರಸಭೆಯಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿ 12 ವಾರ್ಡುಗಳಲ್ಲಿ ಸ್ಪರ್ಧಿಸಿತ್ತು. ಎಲ್ಲಾ ವಾರ್ಡುಗಳಲ್ಲಿ ಬಿಜೆಪಿ ಠೇವಣಿ ಕಳೆದುಕೊಂಡಿದೆ. ಮೂರು ಸ್ಥಾನಗಳಿಗೆ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ ಸಹ ಮತದಾರರ ಮನವೊಲಿಸುವಲ್ಲಿ ವಿಫಲವಾಗಿದೆ.

SCROLL FOR NEXT