ರಾಜಕೀಯ

ಸಿಎಂ ಯಡಿಯೂರಪ್ಪ- ರಾಜ್ಯಪಾಲ ವಜುಭಾಯಿ ವಾಲಾ ಹಠಾತ್ ಭೇಟಿ, ರಾಜಕೀಯ ವಲಯದಲ್ಲಿ ಕುತೂಹಲ!

Sumana Upadhyaya

ಬೆಂಗಳೂರು: ಹಠಾತ್ ಬೆಳವಣಿಗೆಯೊಂದರಲ್ಲಿ ನಿನ್ನೆ ಸಾಯಂಕಾಲ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ. ರಾಜಕೀಯ ವಲಯದಲ್ಲಿ ಇದು ಸಹಜವಾಗಿ ಚರ್ಚೆಯ ವಿಷಯವಾಗಿದೆ.

ಇದೊಂದು ಸೌಹಾರ್ದ ಭೇಟಿ ಎಂದು ರಾಜಭವನ ಹೇಳಿದ್ದು, ರಾಜ್ಯಪಾಲರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಆಗಿದ್ದರಿಂದ ಅವರ ಆರೋಗ್ಯ ವಿಚಾರಿಸಲು ಹೋಗಿದ್ದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇತ್ತೀಚೆಗೆ ಬಿಜೆಪಿಯಲ್ಲಿ ಕೇಳಿಬಂದ ನಾಯಕತ್ವ ಬದಲಾವಣೆ, ಬಿಜೆಪಿ ನಾಯಕರಿಂದ ಕೇಂದ್ರ ನಾಯಕರ ಭೇಟಿ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡುವ ಕೆಲವೇ ಗಂಟೆಗಳ ಮೊದಲು 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮುಖ್ಯಮಂತ್ರಿ ಯಡಿಯೂರಪ್ಪ, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ, ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಮತ್ತು ಮಗಳ ಅಳಿಯ ಸಂಜಯ್ ಶ್ರೀ ಹೀಗೆ ಕುಟುಂಬಸ್ಥರ ವಿರುದ್ಧ ಕೋರ್ಟ್ ವಿಚಾರಣೆ ನಡೆಸಿತ್ತು. ಅದರ ತೀರ್ಪನ್ನು ನ್ಯಾಯಾಲಯ ಜುಲೈ 8ಕ್ಕೆ ಕಾಯ್ದಿರಿಸಿದೆ.

SCROLL FOR NEXT