ವಿ.ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಕೇಂದ್ರ ಸಚಿವ ಸ್ಥಾನ ಬೇಡ ಎಂದು ಹೇಳಿದ್ದೇನೆ: ಸಂಸದ ವಿ.ಶ್ರೀನಿವಾಸ್ ಪ್ರಸಾದ್

ತಮ್ಮ ಆರೋಗ್ಯ ಸರಿ ಇಲ್ಲದ ಕಾರಣ, ಸಚಿವ ಸ್ಥಾನ ಬೇಡ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಚಾಮರಾಜನಗೆರ: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಏಳು ಮಂದಿ ಲೋಕಸಭಾಸದಸ್ಯರಿದ್ದಾರೆ ಈ ಪೈಕಿ ಒಬ್ಬರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ. ತಮ್ಮ ಆರೋಗ್ಯ ಸರಿ ಇಲ್ಲದ ಕಾರಣ, ಸಚಿವ ಸ್ಥಾನ ಬೇಡ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಅವರು ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಲೋಕಸಭೆ ಚುನಾವಣೆ ನಡೆದು ಎರಡು ವರ್ಷ ತುಂಬಿದೆ. ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ಸಚಿವ ಸ್ಥಾನ ಖಾಲಿ ಇದೆ. ಹಾಲಿ ಪ್ರಹ್ಲಾದ್ ಜೋಶಿ ಹಾಗೂ ಸದಾನಂದಗೌಡರು ಕೇಂದ್ರ ಸಚಿವ ಸಂಪುಟದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಸ್ಥಾನ ತುಂಬುವ ಸಾಧ್ಯತೆ ಇದ್ದು, ಎಸ್ಸಿ-ಎಸ್ಟಿಗೆ ಒಂದು ಸ್ಥಾನ ಇತರರಿಗೆ ಇತರರಿಗೆ ಒಂದು ಸ್ಥಾನ ಲಭಿಸಲಿದೆ ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಪಕ್ಷದಲ್ಲಿ ಈ ಕುರಿತು ಯಾವುದೇ ಗೊಂದಲಗಳಿಲ್ಲ. ಬಿ.ಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ನುಡಿದರು. ಚಾಮರಾಜ ನಗರ ಆಕ್ಸಿಜನ್ ದುರಂತದ ಪ್ರಕರಣದಲ್ಲಿ ಈಗಾಗಲೇ ಹೈಕೋರ್ಟ್ ಆದೇಶದಂತೆ ಮೊದಲ ಹಂತದಲ್ಲಿ ೨ ಲಕ್ಷ ರೂ. ಪರಿಹಾರವನ್ನು ೨೪ ಕುಟುಂಬಗಳಿಗೆ ನೀಡಲಾಗಿದೆ. ನ್ಯಾಯಾಲಯದಲ್ಲಿ ಹಾಗೂ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಯುತ್ತಿದ್ದು, ಇದಕ್ಕೆ ಯಾರೂ ಸಹ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT