ಅಭಯಚಂದ್ರ ಜೈನ್ 
ರಾಜಕೀಯ

ನಾನು ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಅಭಯಚಂದ್ರ ಜೈನ್ ರಾಜಕೀಯ ನಿವೃತ್ತಿ?

ಇನ್ನು ಮುಂದೆ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಟ್ಟು ಅವರನ್ನು ಗೆಲ್ಲಿಸಲು ಶ್ರಮಿಸುತ್ತೇನೆ’ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಕಟಿಸಿದ್ದಾರೆ. 

ಮಂಗಳೂರು: ಇನ್ನು ಮುಂದೆ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಟ್ಟು ಅವರನ್ನು ಗೆಲ್ಲಿಸಲು ಶ್ರಮಿಸುತ್ತೇನೆ’ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಕಟಿಸಿದ್ದಾರೆ. 

ಮಂಗಳೂರಿನಲ್ಲಿ ಮಾತನಾಡಿದ ಅವರು ಕಳೆದ ಚುನಾವಣೆಗೂ ಮೊದಲೇ ಆಗಿನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮಿಥುನ್ ರೈ ಅವರಿಗೆ ಅವಕಾಶ ಕೊಡಿ ಎಂದು ವರಿಷ್ಠರಿಗೆ ಹೇಳಿದ್ದೆ. ಚುನಾವಣೆಯಲ್ಲಿ ಹೀನಾಯವಾಗಿ ಸೋತೆ. ಪ್ರಾಮಾಣಿಕತೆ ನನ್ನನ್ನು ಗೆಲ್ಲಿಸಲಿಲ್ಲ. ಇನ್ನು ಮುಂದೆ ಯುವಕರನ್ನು ನಿಲ್ಲಿಸಿ ಗೆಲ್ಲಿಸಲು ಪಣ ತೊಡುತ್ತೇನೆ ಎಂದು ಜೈನ್ ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರೇ ಹೆಚ್ಚಾಗಿ ಇರೋದು. ಹೀಗಾಗಿ ಮುಂದಿನ ದಿನದಲ್ಲಿ ಯುವಕರಿಗೆ ಆದ್ಯತೆ ನೀಡಬೇಕು ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಘೋಷಿಸಿದ್ದಾರೆ.

ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಯುವಕರಿಗೆ ಸ್ಥಾನ ನೀಡುವುದು ಇಂದಿನ ರಾಜಕೀಯದ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ನಾನು ಈಗಾಗಲೇ ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಯಂ ಆಗಿ ನಿರ್ಧರಿಸಿ, ಯುವಕರಿಗೆ ಸ್ಥಾನ ನೀಡಿ ಗೆಲ್ಲಿಸಲು ನಾನು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP