ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿರುವ ಸಿಪಿ ಯೋಗೇಶ್ವರ್ 
ರಾಜಕೀಯ

ಸಿಎಂ ಹುದ್ದೆ ಅಂಬಾರಿ ಹೊರುವ ಆನೆ ಇದ್ದಂತೆ, ಅದೇನು ಶಾಶ್ವತವಲ್ಲ: ಯೋಗೇಶ್ವರ್

ಮುಖ್ಯಮಂತ್ರಿ ಹುದ್ದೆ ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ‌ ಅದೇನು ಶಾಶ್ವತ ಅಲ್ಲ‌ ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ‌ ಅದೇನು ಶಾಶ್ವತ ಅಲ್ಲ‌ ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ. 

ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಎಂಬುದು ದಸರಾ ಅಂಬಾರಿ ಹೊರುವ ಆನೆ ಇದ್ದಂತೆ. ಅದು ಶಾಶ್ವತವಲ್ಲ. ಅದು ವೈಭವ, ಪ್ರತಿಷ್ಠೆಯಲ್ಲ. ಅದು ಜನಪರ ಕಾಳಜಿ ಇರುವ ಸಂವೇದನಾಶೀಲವಾದ ಹುದ್ದೆ. ಇನ್ನೇನು ದಸರಾ ಸಮೀಪಿಸುತ್ತಿರುವುದರಿಂದ ಅಷ್ಟರಲ್ಲಿ ಹೈಕಮಾಂಡ್'ಗೆ ಅಂಬಾರಿ ಹೊರುವ ಆನೆ ಸಿಗಲಿದೆ ಎಂದು ಹೇಳಿದ್ದಾರೆ. 

ಆನೆ ತೂಕ ಮುಖ್ಯವಲ್ಲ. ಕೊನೆವರೆಗೂ ಅಂಬಾರಿಯನ್ನು ಯಶಸ್ವಿಯಾಗಿ ತಲುಪಿಸುವ ಆನೆಯಾಗಬೇಕು. ಸಿಎಂ ಸ್ಥಾನ ಸಾಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಬೇಕು ಅಂತ ಇದ್ದಾರೆ. ಅಂಬಾರಿ ಹೊರುವ ಆನೆಯನ್ನು ಆಗಾಗ ಬದಲಾಯಿಸಲಾಗುತ್ತದೆ. ಬದಲಾವಣೆ ಜಗದ ನಿಯಮ. ಅರ್ಜುನ, ಅಭಿಮನ್ಯು, ಬಲರಾಮ ಎಲ್ಲರೂ ಅಂಬಾರಿ ಹೊತ್ತಿದ್ದಾರೆ. ಅರ್ಜಿನ ಅಂಬಾರಿ ಹೊತ್ತ ಅಂತಾ ಮರಿ ಆನೆಗೆ ಅಂಬಾರಿ ಹೊರಿಸಲು ಸಾಧ್ಯವಿಲ್ಲ. ಕರ್ನಾಟಕ ಆನೆ ಮತ್ತು ಹುಲಿಗಳಿಗೆ ಹೆಚ್ಚು ಹೆಸರುವಾಸಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel