ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಸಿಎಂ ಯಡಿಯೂರಪ್ಪನವರ ಹಗರಣಗಳು ಹೊರಗೆ ಬಂದರೆ ಮಠಾಧೀಶರು ಮಠ ಬಿಟ್ಟು ಹೋಗಬೇಕಾಗುತ್ತದೆ: ಬಸನಗೌಡ ಪಾಟೀಲ್ ಯತ್ನಾಳ್  

ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಸಿಎಂ ಬಿಎಸ್ ವೈ ಚಕ್ರವ್ಯೂಹ ವಿರುದ್ಧ ಹೋರಾಡಿ ನಾನು ಅರ್ಜುನನಾಗಿ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

ಮೈಸೂರು: ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಸಿಎಂ ಬಿಎಸ್ ವೈ ಚಕ್ರವ್ಯೂಹ ವಿರುದ್ಧ ಹೋರಾಡಿ ನಾನು ಅರ್ಜುನನಾಗಿ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬಿಎಸ್ ವೈ ವಿರುದ್ಧ ಹೋರಾಟವನ್ನು ಅವರು ಮಹಾಭಾರತದ ಚಕ್ರವ್ಯೂಹ ಯುದ್ಧಕ್ಕೆ ಹೋಲಿಸಿ, ಅಭಿಮನ್ಯುನೂ ಆಗಬಹುದು, ಅರ್ಜುನನೂ ಆಗಬಹುದು, ನಾನು ಅರ್ಜುನನಾಗಿ ಮುಖ್ಯಮಂತ್ರಿಗಳ ವಿರುದ್ಧ ಗೆಲ್ಲುತ್ತೇನೆ ಎಂದರು.

ಅಭಿಮನ್ಯುವಿನ ಇತಿಹಾಸವನ್ನು ಈಗಲೂ ಜನರು ನೆನಪು ಮಾಡಿಕೊಳ್ಳುತ್ತಾರೆ, ಅಭಿಮನ್ಯು ಒಬ್ಬ ಶ್ರೇಷ್ಠ ಯೋಧ, ನಾನು ಅರ್ಜುನನಾಗುತ್ತೇನೆ, ಸಿಎಂ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ, ಗೌರವಯುತವಾಗಿ ಅವರು ನಿವೃತ್ತಿ ತೆಗೆದುಕೊಳ್ಳಬೇಕು, ಅವರ ಆಡಳಿತವನ್ನು ಪುತ್ರ ವಿಜಯೇಂದ್ರ ನಡೆಸುತ್ತಿದ್ದಾನೆ. ಮುಖ್ಯಮಂತ್ರಿಗಳಿಗೆ ನೂರಾರು ಫೈಲ್ ಗಳಿಗೆ ಸಹಿ ಮಾಡುವ ಶಕ್ತಿ ಕೂಡ ಇಲ್ಲ, ಇಂತಹ ಸಂದರ್ಭದಲ್ಲಿ ಅವರಿಗೆ ಅಧಿಕಾರವೇಕೆ, ಸ್ವಯಂ ನಿವೃತ್ತಿ ಪಡೆಯಬೇಕು ಎಂದು ಗುಡುಗಿದರು.

ನಿಮ್ಮದು ಅರಣ್ಯ ರೋಧನ ಎಂದು ಎನಿಸುವುದಿಲ್ಲವೇ ಎಂದು ಸುದ್ದಿಗಾರರು ಕೇಳಿದಾಗ, ಹೋರಾಟ, ಸಂಘರ್ಷಗಳಲ್ಲಿ ಅರಣ್ಯರೋಧನ ಇದ್ದೇ ಇರುತ್ತದೆ, ಆದರೆ ಒಂದಲ್ಲ ಒಂದು ದಿನ ಸತ್ಯ ಬೆಳಕಿಗೆ ಬಂದೇ ಬರುತ್ತದೆ. ಪಾಂಡವರಿಗೆ ವನವಾಸ ಹೋಗಿ ಬಂದ ಮೇಲೆ ಜಯ ಸಿಕ್ಕಿತು, ಹಾಗೆಯೇ ನಾವು ವನವಾಸ ಮುಗಿಸಿ ಅಜ್ಞಾತವಾಸದಲ್ಲಿದ್ದೇವೆ, ಅಜ್ಞಾತವಾಸವೂ ಮುಗಿಯುತ್ತಾ ಬಂದಿದೆ, ಹೋರಾಟ ನಡೆಯುತ್ತಿದೆ, ಪಟ್ಟಾಭಿಷೇಕ ಮಾಡುವ ಕಾಲ ಬಂದಿದೆ, ಒಂದಲ್ಲ ಒಂದು ದಿನ ಜಯ ಸಿಗುತ್ತದೆ ಎಂದರು.

ಒಬ್ಬೊಬ್ಬರಿಗೆ ಒಂದೊಂದು ಕಾಲವೆಂಬುದು ಇರುತ್ತದೆ, ಮುಖ್ಯಮಂತ್ರಿಗಳ ಬಳಿ ಈಗ ಹಣ ಇದೆ, ಹಾಗಾಗಿ ಮಠಾಧೀಶರುಗಳ ಕಡೆಯಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಲಿಂಗಾಯತರು ಹೋರಾಟ ಮಾಡುತ್ತೀವಿ ಎಂದು ಮಠಾಧೀಶರು ಹೇಳುತ್ತಿದ್ದಾರೆ. ಮುಖ್ಯಮಂತ್ರಿಗಳ ಹಗರಣಗಳು ಹೊರಗೆ ಬಂದರೆ ಈ ಮಠಾಧೀಶರುಗಳು ಯಾರೂ ಮಾತನಾಡುವುದಿಲ್ಲ, ನಂತರ ಮುಖ್ಯಮಂತ್ರಿಗಳು ಸಮಾಜದ ಮುಂದೆ ಮುಖ ತೋರಿಸದ ರೀತಿ ಆಗುತ್ತದೆ ಎಂದು ಟೀಕಿಸಿದರು.

ಇಂದು ಮುಖ್ಯಮಂತ್ರಿಗಳ ಪರವಾಗಿ ಮಾತನಾಡುವ ಮಠಾಧೀಶರು ಬಹಳ ಎಚ್ಚರಿಕೆಯಿಂದ ಮಾತನಾಡಬೇಕು, ಮುಖ್ಯಮಂತ್ರಿಗಳ ಹಗರಣಗಳು ಒಂದೊಂದೇ ಹೊರಗೆ ಬಂದಾಗ ಈ ಮಠಾಧೀಶರುಗಳೆಲ್ಲ ಮಠ ಬಿಟ್ಟು ಓಡಿಹೋಗಬೇಕಾಗುತ್ತದೆ, ನಾವು ಈಗ ಸುಮ್ಮನೆ ಕುಳಿತಿದ್ದೇವೆ, ಕೊನೆಗೊಂದು ದಿನ ಬ್ರಹ್ಮಾಸ್ತ್ರ ಪ್ರಯೋಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಗಳ ವಿರುದ್ಧ ಶೀಘ್ರದಲ್ಲಿಯೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ, ನಾಳೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಬಹುದು, ಪ್ರಧಾನಿಗಳ ಮೇಲೆ ನನಗೆ ವಿಶ್ವಾಸವಿದೆ, ಹೈಕಮಾಂಡ್ ಯಡಿಯೂರಪ್ಪನವರನ್ನು ನಾಯಕತ್ವದಿಂದ ಬದಲಾಯಿಸುತ್ತದೆ ಎಂಬ ನಂಬಿಕೆ ನನಗಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT