ಡಾ.ಸಿ.ಎನ್. ಅಶ್ವತ್ಥ ನಾರಾಯಣ 
ರಾಜಕೀಯ

ಜೆಡಿಎಸ್ ಜೊತೆಗೆ ಬಿಜೆಪಿ ಒಳ ಒಪ್ಪಂದ ಆರೋಪ ಸರಿಯಲ್ಲ: ಡಿಸಿಎಂ ಅಶ್ವತ್ಥ ನಾರಾಯಣ

ಸ್ಥಳೀಯ ಸಂಸ್ಥೆ ಚುನಾವಣೆ ಸೇರಿ ಯಾವುದೇ ವಿಷಯಗಳಲ್ಲೂ ಬಿಜೆಪಿ- ಜೆಡಿಎಸ್‌ ನಡುವೆ ಒಳ ಒಪ್ಪಂದ ಆಗಿಲ್ಲ. ಈ ಬಗ್ಗೆ ಕೇಳಿ ಬರುತ್ತಿರುವ ಮಾತುಗಳು ಆಧಾರ ರಹಿತ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ರಾಮನಗರ: ಸ್ಥಳೀಯ ಸಂಸ್ಥೆ ಚುನಾವಣೆ ಸೇರಿ ಯಾವುದೇ ವಿಷಯಗಳಲ್ಲೂ ಬಿಜೆಪಿ- ಜೆಡಿಎಸ್‌ ನಡುವೆ ಒಳ ಒಪ್ಪಂದ ಆಗಿಲ್ಲ. ಈ ಬಗ್ಗೆ ಕೇಳಿ ಬರುತ್ತಿರುವ ಮಾತುಗಳು ಆಧಾರ ರಹಿತ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ರಾಮನಗರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರತಿಪಕ್ಷಗಳಿಗೆ,‌ ಮುಖ್ಯವಾಗಿ ಕಾಂಗ್ರೆಸ್‌ಗೆ ಒಳ್ಳೆಯದು ಮಾತಾಡಿ ಅಭ್ಯಾಸವಿಲ್ಲ. ಮಂಡ್ಯ, ಮೈಸೂರು, ರಾಮನಗರ ಸೇರಿ ಯಾವುದೇ ಭಾಗದಲ್ಲಿ ಬಿಜೆಪಿ- ಜೆಡಿಎಸ್‌ ನಡುವೆ ಹೊಂದಾಣಿಕೆ ಇಲ್ಲ ಎಂದರು. 

ಎಲ್ಲರಿಗೂ ಗೊತ್ತಿರುವಂತೆ ಜೆಡಿಎಸ್‌ ನಮಗೆ ವಿರೋಧ ಪಕ್ಷ. ಹಾಗೆ ನೋಡಿದರೆ ಒಳಒಪ್ಪಂದಗಳು ಇರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಮಾತ್ರ. ಈ ಬಗ್ಗೆ ದೂರುವವರು ಅವೆರಡೂ ಪಕ್ಷಗಳ ಬಗ್ಗೆ ಮಾತನಾಡಬೇಕು ಎಂದು ಡಿಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್